ಮೈಸೂರು

'ಗ್ರಾಮೀಣರಿಗೆ ಸ್ವಾತಂತ್ರ್ಯ ಲಭಿಸಿಲ್ಲ'

Published On :

ನಂಜನಗೂಡು: ಜಾತೀಯತೆ ಮತ್ತು ಮೇಲು ಕೀಳು ಸಮಾಜದಲ್ಲಿ ಇನ್ನೂ ಜೀವಂತವಾಗಿ, ಅಸಮಾನತೆ ದೊಡ್ಡ ಪಿಡುಗಾಗಿರುವ ಕಾರಣ ಗ್ರಾಮೀಣ ಪ್ರದೇಶಗಳ ಜನರಿಗೆ ನಿಜವಾದ ಸ್ವಾತಂತ್ರ್ಯ ದೊರೆತಿಲ್ಲ ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ವಿಷಾದಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ 65ನೇ ಗಣರಾಜೋತ್ಸವ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಬೇರೆ ದೇಶಗಳ ಜತೆ ಭಾರತ ಸರಿಸಮನಾಗಿ ಅಭಿವೃದ್ಧಿ ಹೊಂದಲು ಜಾತೀಯತೆ ಮತ್ತು ಮೂಢನಂಬಿಕೆ ಪೂರ್ಣ ಪ್ರಮಾಣದಲ್ಲಿ ನಿರ್ಮೂಲನೆಯಾಗಬೇಕು. ಸಮಾನತೆ ಸಂಪೂರ್ಣ ಜಾರಿಯಾದರೆ ಮಾತ್ರ ಬಿ.ಆರ್. ಅಂಬೇಡ್ಕರ್ ಕನಸು ನನಸಾಗುವುದರೊಂದಿಗೆ ಗುರಿ ಮುಟ್ಟಲು ಸಾಧ್ಯ ಎಂದರು.
ಪೊಲೀಸರ ಪಥಸಂಚಲನ ಸೇರಿದಂತೆ ಕಾಲೇಜಿನ ಶಾಲಾ ಮಕ್ಕಳಿಂದ ತಹಸೀಲ್ದಾರ್ ಅರಳ್ಕುಮಾರ್ ವಂದನೆ ಸ್ವೀಕರಿಸಿ ಧ್ವಜಾರೋಹಣ ನೆರವೇರಿಸಿದರು.
ತಾಲೂಕಿನ ಶಾಲಾ ವಿದ್ಯಾರ್ಥಿಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರತಿಭೆಗಳು ಹಗಿನವಾಳು ಗ್ರಾಮದ ಅವನಾಸಿ, ಚುಂಚನಹಳ್ಳಿ ನಂಜಯ್ಯ, ಮಲ್ಲಹಳ್ಳಿ ನಾಗಮ್ಮ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ತಾಪಂ ಉಪಾಧ್ಯಕ್ಷ ಚಿಕ್ಕೀರಮ್ಮ, ಇಒ ಡಾ.ಕೃಷ್ಣಂರಾಜು, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ, ಸ್ವಾತಂತ್ರ್ಯ ಹೋರಾಟಗಾರರಾದ ಕುಮಾರಸ್ವಾಮಿ, ಸತ್ಯನಾರಾಯಣ, ಶ್ರೀಕಂಠಯ್ಯ, ಪುರಸಭಾ ಸದಸ್ಯ ದೊಡ್ಡಮಾದಯ್ಯ, ಸಿಪಿಐ ಜಿ.ಎಸ್. ರಘು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ, ಗುರುಮಲ್ಲಪ್ಪ, ಆರ್.ಟಿ. ಜಗದೀಶ್, ಬಿಇಒ ಪುರುಷೋತ್ತಮ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.