'ನಮ್ಮದು ಮಾದರಿ ಸಂವಿಧಾನ'
ಹುಣಸೂರು: ವಿಶ್ವದ ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ನಮ್ಮ ದೇಶದಲ್ಲಿ ಜಾರಿಗೆ ತಂದಿರುವ ಸಂವಿಧಾನವು ಮಾದರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಬಸವರಾಜು ಹೇಳಿದರು. ಪಟ್ಟಣದ ಮುನೇಶ್ವರ ಮೈದಾನದಲ್ಲಿ ಭಾನುವಾರ ನಡೆದ 64ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ವಿಶ್ವದ ಹಲವು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿದ ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅವರು ಎರಡೂವರೆ ವರ್ಷ ಕಾಲ ಮಿತಿಯೊಳಗೆ ದೇಶದ ಸಂವಿಧಾನ ಸಿದ್ಧಪಡಿಸಿ ವಿಶ್ವದಲ್ಲೆ ಮಾದರಿಯನ್ನಾಗಿ ಮಾಡಿದರು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಪಿ. ಮಂಜುನಾಥ್ ಮಾತನಾಡಿ, ಸಂವಿಧಾನ ಬದ್ಧವಾಗಿರುವ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಅನ್ನಭಾಗ್ಯ, ಶಾದಿಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ಶೋಷಿತ ಮತ್ತು ಅಸಂಘಟಿತ ವರ್ಗಗಳನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಪಟ್ಟಣದ ಪ್ರತಿಯೊಂದು ಶಾಲೆಯಿಂದಲ್ಲೂ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಕರಾಟೆ, ಯೋಗ, ನೃತ್ಯಗಳು, ಭಕ್ತಿಗೀತೆ, ಭಾವಗೀತೆ ಪ್ರಸ್ತುತಪಡಿಸಿದರು. ಜಿಪಂ ಸದಸ್ಯರಾದ ಡಾ.ಪುಷ್ಪಾವತಿ ಅಮರನಾಥ್, ರಮೇಶ್, ಎಂ.ದೇವರಾಜು, ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯಕ, ಉಪಾಧ್ಯಕ್ಷೆ ಜಯರತ್ನ ಮಹೇಂದ್ರ, ಸೆಸ್ಕ್ ಇಇ ನಾಗೇಶ್, ಬಿಇಒ ರಾಜಶೇಖರ್, ತಹಸೀಲ್ದಾರ್ ವೆಂಕಟಚಾಲಪ್ಪ, ಡಿವೈಎಸ್ಪಿ ನಂಜುಂಡ, ವೃತ್ತ ನಿರೀಕ್ಷಕ ಗಜೇಂದ್ರಪ್ರಸಾದ್, ಲೋಕೋಪಯೋಗಿ ಎಇಇ ವಾಸುದೇವನ್, ಪುರಸಭೆ ಮುಖ್ಯಾಧಿಕಾರಿ ರಮೇಶ್, ಬಿಳಿಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು, ಸಮಾಜ ಕಲ್ಯಾಣಾಧಿಕಾರಿ ಹೊನ್ನೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

