ಮೈಸೂರು

ಫೆ.17ಕ್ಕೆ ಬಸವ ಭವನ ಕಾಮಗಾರಿಗೆ ಪೂಜೆ

Published On :

ಕೆ.ಆರ್. ನಗರ: ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದಿಂದ 3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಬಸವ ಭವನದ ಕಾಮಗಾರಿಗೆ ಫೆ.17 ರಂದು ಭೂಮಿಪೂಜೆ ನೆರವೇರಿಸಲು ತೀರ್ಮಾನಿಸಲಾಯಿತು.
ಪಟ್ಟಣದ ಹೊರವಲಯದಲ್ಲಿರುವ ಅರಕೆರೆ ವಿರಕ್ತ ಮಠದಲ್ಲಿ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳು ಮತ್ತು ವೀರಶೈವ ಮುಖಾಂಡರ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳತಾಯಿತು.
ಅಂದಿನ ಸಮಾರಂಭಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕ ಸಾ.ರಾ. ಮಹೇಶ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್, ಸಂಸದರಾದ ರಮ್ಯ, ಎಚ್. ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಅಲ್ಲದೇ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಬಗ್ಗೆ ಚರ್ಚಿಸಲಾಯಿತು. ತಾಲೂಕು ವೀರಶೈವ ಯುವ ಘಟಕದ ಅಧ್ಯಕ್ಷ ಸಣ್ಣಲಿಂಗಪ್ಪ, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಣ್ಣಲಿಂಗಪ್ಪ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅರುಣ್ ಬಿ. ನರಗುಂದ್, ಕಾರ್ಯದರ್ಶಿ ರಾಜಶೇಖರ್, ಲಾಳನಹಳ್ಳಿ ಕೆಂಪರಾಜು, ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಎಸ್.ವಿ. ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.