ಮೈಸೂರು

ಮೀಸಲಾತಿ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ: ಶಾಸಕ ಚಿಕ್ಕಮಾದು

Published On :

ಎಚ್.ಡಿ. ಕೋಟೆ: ತಾಲೂಕು ಆಡಳಿತದಿಂದ ಭಾನುವಾರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ 65ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ತಹಸೀಲ್ದಾರ್ ಕೃಷ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್. ಚಿಕ್ಕಮಾದು, ನಮ್ಮ ದೇಶವನ್ನು ಪರಕೀಯರಿಂದ ಬಿಡಿಸಿಕೊಳ್ಳಲು ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಹಲವರು ಪ್ರಾಣತೆತ್ತರು. ನಮಗೆ ಸಿಕ್ಕ ಸ್ವಾತಂತ್ರ್ಯ ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಮೀಸಲಾತಿ ನೀಡಿದರೂ ಸಮಸ್ಯೆ ಮುಗಿಯುವುದಿಲ್ಲ ಎಂದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಬಾಲಸುಬ್ರಮಣ್ಯ (ಶಿಕ್ಷಣ), ಮಹದೇವಸ್ವಾಮಿ (ಕ್ರೀಡೆ), ಕೆ.ಪಿ. ಸಿದ್ದಪ್ಪ (ಯಕ್ಷಗಾನ), ಚಿಕ್ಕನಾಯಕ (ಪ್ಯಾರಾ ಒಲಂಪಿಕ್) ಅವರನ್ನು ಗೌರವಿಸಲಾಯಿತು. ಇದಕ್ಕೂ ಮುನ್ನ ಶ್ವೇತ ವಸ್ತ್ರ ಧರಿಸಿದ್ದ ಶಾಲಾ ಮಕ್ಕಳು ಹುಣಸೂರು- ಬೇಗೂರು ರಸ್ತೆಯ ಮುಖಾಂತರ ಮೆರವಣಿಗೆ ನಡೆಸಿ ಸರ್ಕಾರಿ ಬಾಲಕರ ಪದವಿ ಕಾಲೇಜು ಮೈದಾನಕ್ಕೆ ಆಗಮಿಸಿದರು.
ತಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಬಿ.ಜಿ. ಮಹೇಂದ್ರ, ಜಿಪಂ ಸದಸ್ಯೆ ಬಾಗ್ಯಲಕ್ಷ್ಮಿ ನಿಂಗರಾಜು, ತೋಟದ ಬೆಳೆಗಾರರ ಸಂಘದ ಅಧ್ಯಕ್ಷ ಪುಟ್ಟಯ್ಯ, ತಾಲೂಕು ಕಸಾಪ ಅಧ್ಯಕ್ಷ ಮಹೇಶ್, ರೈತ ಸಂಘದ ಅಧ್ಯಕ್ಷ ಪಳನಿಸ್ವಾಮಿ, ಜಿಪಂ ಮಾಜಿ ಸದಸ್ಯರಾದ ವೆಂಕಟಸ್ವಾಮಿ, ರವಿ, ಪಪಂ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ತಂಬಾಕು ಮಂಡಳಿ ಸದಸ್ಯ ಬೀಮನಹಳ್ಳಿ ಮಹದೇವು, ಎಂ.ಸಿ. ದೊಡ್ಡನಾಯಕ, ಇಒ ಲಿಂಗರಾಜು, ಬಿಇಒ ಉದಯಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.