ಸಂಭ್ರಮದ ಗಣರಾಜ್ಯೋತ್ಸವ
ಕ.ಪ್ರ.ವಾರ್ತೆ ಕೆ.ಆರ್. ನಗರ ಜ. 26
ಡಾ.ಅಂಬೇಡ್ಕರ್ ಅವರ ಕನಸು ನನಸಾಗಿ ಸಂವಿಧಾನದ ಆಶಯಗಳು ಈಡೇರಬೇಕಾದರೆ ಚುನಾಯಿತ ಜನಪ್ರತಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ದೇಶದ ಒಳಿತಿಗಾಗಿ ಒಗ್ಗಟ್ಟಿನಿಂದ ದುಡಿಯಬೇಕು ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಬಯಲು ರಂಗಮಂದಿರದಲ್ಲಿ ಭಾನುವಾರ ನಡೆದ 65ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು ಅರ್ಧ ಶತಮಾನ ಕಳೆದರೂ ರಾಷ್ಟ್ರೀಯ ಹಬ್ಬಗಳಿಗೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳದಿರುವುದು ವಿಷಾದನೀಯ. ಪ್ರತಿಯೊಬ್ಬರಲ್ಲಿಯೂ ದೇಶ ಪ್ರೇಮ ಬಾರದಿದ್ದರೆ ಅಬಿವೃದ್ಧಿ ಅಸಾಧ್ಯ ಎಂದರು. ಎಲ್ಲಾ ಸ್ತರಗಳಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಯುವಶಕ್ತಿ ಇದನ್ನು ತೊಡೆದು ಹಾಕಲು ಕಂಕಣಬದ್ಧರಾಗಬೇಕು. ಪ್ರಜೆಗಳು ಮನಸ್ಸು ಮಾಡಿದರೆ ಯಾವ ಕೆಲಸವೂ ಅಸಾಧ್ಯವಿಲ್ಲ. ಆದ್ದರಿಂದ ನಾವೆಲ್ಲಾ ಭ್ರಷ್ಟಾಚಾರ ತೊಡೆದು ಹಾಕುವ ಪಣ ತೊಡೋಣ. ನಂತರ ಸ್ವಚ್ಛ ಸಮಾಜ ನಿರ್ಮಿಸೋಣ ಎಂದು ತಿಳಿಸಿದರು.
ಗಮನ ಸೆಳೆದ ಮಕ್ಕಳು: ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಮುಂದೆ ಸಾಗಿದ ವಿವಿಧ ಶಾಲೆಗಳ ಪುಟ್ಟ ಮಕ್ಕಳು ಸ್ಕೇಟಿಂಗ್ ಮಾಡಿ ರಾಷ್ಟ್ರಧ್ವಜ ಕೈಯಲ್ಲಿಡಿದು ದೇಶಪ್ರೇಮ ಮೆರೆದರು.
ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ. ಚಿನ್ನಸ್ವಾಮಿ, ಜಿಪಂ ಸದಸ್ಯರಾದ ಸಿ.ಜೆ. ದ್ವಾರಕೀಶ್, ಕಲ್ಪನಾ ಧನಂಜಯ, ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಉಪಾಧ್ಯಕ್ಷೆ ಶಶಿಕಲಾ ರಮೇಶ್, ಪುರಸಭಾ ಸದಸ್ಯ ಎಚ್.ಎನ್. ಶಿವಕುಮಾರ್, ತಾಪಂ ಇಒ ಸಿದ್ದಲಿಂಗಮೂರ್ತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್, ಸತೀಶ್, ರಂಗಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಪ್ರಸಾದ್, ದಲಿತ ಮುಖಂಡ ಹನಸೋಗೆ ನಾಗರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

