ಆರ್ಟಿಇ ವಿದ್ಯಾ ಸಹಾಯಹಸ್ತ
ಮೈಸೂರು: ಉಚಿತ ಹಾಗೂ ಕಡ್ಡಾಯ ಶಿಕ್ಷಣ ಕಾಯಿದೆ ಸಮರ್ಪಕ ಅನುಷ್ಠಾನಕ್ಕಾಗಿ ಜ.28 ರಿಂದ ಫೆ.8 ರವರೆಗೆ ಯುವ ಕಾಂಗ್ರೆಸ್ ವತಿಯಿಂದ ವಿದ್ಯಾಸಹಾಯ ಹಸ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಪ್ರಸನ್ನಕುಮಾರ್ ಹೇಳಿದರು.
ಖಾಸಗಿ ಶಾಲೆಗಳಲ್ಲಿ ಬಡ ಮಕ್ಕಳು ಉಚಿತ ಶಿಕ್ಷಣ ಪಡೆಯಲು ಈ ಕಾಯಿದೆಯನ್ನು ಕೇಂದ್ರ ಯುಪಿಎ ಸರ್ಕಾರ ಜಾರಿಗೊಳಿಸಿದೆ. ಆದರೆ, ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರವು ಈ ಕಾಯಿದೆ ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಯಿತು ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಹೀಗಾಗಿ 2012-13ನೇ ಸಾಲಿನಲ್ಲಿ ಮಾಹಿತಿ ಕೊರತೆ, ಖಾಸಗಿ ಶಾಲೆಗಳ ದಬ್ಬಾಳಿಕೆ, ದಲ್ಲಾಳಿಗಳ ಹಾವಳಿಯಿಂದ ರಾಜ್ಯದಲ್ಲಿ 37 ಸಾವಿರ ಸೀಟುಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಆರ್ಟಿಇ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯಾ ಸಹಾಯ ಹಸ್ತ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ಮೊ. 98801 23457, 99002 12957 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

