ಮೈಸೂರು

ಮೋದಿ ಪಿಎಂ ಆಗುವುದನ್ನು ತಡೆಯುವುದು ಅಸಾಧ್ಯ

Published On :

ರಾವಂದೂರು: ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭಾ ಚುನಾವಣೆಯ ನಂತರ ಪ್ರಧಾನಿಯಾಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ/ ಮೈಸೂರು-ಕೊಡಗು ಉಸ್ತುವಾರಿ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ ಬಿಜೆಪಿ ನಡಿಗೆ ಹಾಗೂ ಲೋಹ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಧಾನಿ ಮನಮೋಹನ್ಸಿಂಗ್ ನಿಷ್ಪ್ರಯೋಜಕ ಪ್ರಧಾನಿಯಾಗಿದ್ದು, ಇಂದಿನ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ಜೀವನ ಮಾಡುವುದೇ ಕಷ್ಟಕರವಾಗಿದ್ದು, ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ದೂರಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಆರ್.ಟಿ. ಸತೀಶ್ ಮಾತನಾಡಿದರು. ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಎಂ. ರಾಜೇಗೌಡ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ, ಮೈಸೂರು ನಗರ ಘಟಕದ ಅಧ್ಯಕ್ಷ ರವಿ, ಮುಖಂಡರಾದ ಪ್ರಸನ್ನಕೇಶವ, ಕೃಷ್ಣಪ್ರಸಾದ್, ಕೆ.ಕೆ. ಶಶಿ, ಪಿ.ಜೆ. ರವಿ, ಆರ್. ಮೋಹನ್, ಯುವ ಘಟಕದ ಅಧ್ಯಕ್ಷ ರವಿ, ಉಪಾಧ್ಯಕ್ಷ ಮನು ಬೆಳತೂರ್, ಶಿವಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.