ಮೈಸೂರು

ಆದಿವಾಸಿಗಳ ಹಕ್ಕು ಜಾರಿಗೆ ಆಗ್ರಹಿಸಿ ಪ್ರತಿಭಟನೆ

Published On :

ಮೈಸೂರು: ಆದಿವಾಸಿ ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಮತ್ತು ಸಮುದಾಯಿಕ ಹಕ್ಕುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ಜ.30 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಹುಣಸೂರು ತಾಲೂಕು ಕಚೇರಿ ಬಳಿ ಪ್ರತಿಭಟಿಸಲಿದೆ.
ಆದಿವಾಸಿಗಳ ಮೇಲೆ ಅರಣ್ಯಾಧಿಕಾರಿಗಳು ಮತ್ತು ಡೋಂಗಿ ಪರಿಸರವಾದಿಗಳು ಸಲ್ಲದ ಆರೋಪ ಮಾಡುತ್ತಿದ್ದಾರೆ. ಅರಣ್ಯದಲ್ಲಿ ಅಂತರ್ಜಲ ಸಾಕಷ್ಟು ಕುಸಿದು, ಜಲಮೂಲ ಬತ್ತಿ ಹೋಗಿದೆ. ಹಳ್ಳಕೊಳ್ಳ ಕೆರೆಕುಂಟೆಗಳು ಹೂಳು ತುಂಬಿವೆ. ಪ್ರಾಣಿಗಳಿಗೆ ಸಾಕಷ್ಟು ಆಹಾರ ಮತ್ತು ನೀರಿನ ಕೊರತೆ ಉಂಟಾಗಿದೆ. ಪ್ರಾಣಿಗಳ ಮೇಲಿನ ಅನಗತ್ಯ ಅಧ್ಯಯನಗಳಿಂದ ಘಾಸಿಗೊಂಡ ಪ್ರಾಣಿಗಳು ದಿಕ್ಕುತಪ್ಪಿ ನಾಡಿನೆಡೆಗೆ ಧಾವಿಸುತ್ತಿವೆ. ಲಿಫ್ಟ್ ಸಂಸ್ಥೆ ಮುಖ್ಯಸ್ಥ ಮುತ್ತಣ್ಣ ಅವರು ಈ ವಿಷಯವನ್ನು ಸರ್ಕಾರದಿಂದ ಮುಚ್ಚಿಟ್ಟಿರುವುದಾಗಿ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಕೃಷ್ಣಯ್ಯ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಲಿಫ್ಟ್ ಸಂಸ್ಥೆ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು, ಆದಿವಾಸಿ ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಮತ್ತು ಸಮುದಾಯಿಕ ಹಕ್ಕುಗಳನ್ನು ಶೀಘ್ರವಾಗಿ ಜಾರಿಗೊಳಿಸಬೇಕು, ಸಮುದಾಯಿಕ ಹಕ್ಕು ಪತ್ರವನ್ನು ಮೈಸೂರು ಜಿಲ್ಲೆಯ 19 ಹಾಡಿಗಳಲ್ಲಿ ವಿತರಿಸಿ, ಆದಿವಾಸಿಗಳಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹ ಮಾಡದಂತೆ ಕೆಲವು ಡೋಂಗಿ ಪರಿಸರವಾದಿಗಳ ಕುಮ್ಮಕ್ಕಿನಿಂದ ಆದಿವಾಸಿಗಳ ವಿರುದ್ಧ ಆದೇಶ ನೀಡಿರುವ ಹುಣಸೂರು ವನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರನ್ನು ಆದಿವಾಸಿ ದೌರ್ಜನ್ಯ ಕಾಯ್ದೆಯಡಿ ಅಮಾನತುಗೊಳಿಸಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ. ಕಾವೇರ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಕುಮಾರ್, ಮುಖಂಡ ಬಂಧು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.