ಮೈಸೂರು

ಕಾಡಾನೆ ದಾಳಿ: ವ್ಯಕ್ತಿಗೆ ಗಾಯ

Published On :

ಎಚ್.ಡಿ. ಕೋಟೆ: ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಕಾಳಯ್ಯ ಎಂಬವರ ಪುತ್ರ ಜಗದೀಶ್ (55) ಎಂಬಾತ ಮಂಗಳವಾರ ಬೆಳಗ್ಗೆ 6ರ ಸಮಯದಲ್ಲಿ ಹಾಲಿನ ಡೇರಿಗೆ ತೆರಳುವಾಗ ಆತನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. ಆನೆಯು ಸೊಂಡಲಿನಿಂದ ಜಗದೀಶ್ ಅವರನ್ನು ಬಿಸಾಡಿ, ಎರಡು ಕಾಲನ್ನು ತುಳಿದಿದ್ದು, ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದರೆ, ಮೈಸೂರಿಗೆ ಕರೆದುಕೊಂಡು ಹೋಗಲಾವುದೆಂದು ಅಂತರಸಂತೆ ವಲಯಾರಣ್ಯಾಧಿಕಾರಿ ಪೂವಯ್ಯ ತಿಳಿಸಿದ್ದಾರೆ.  ಸಾರ್ವಜನಿಕ ಆಸ್ಪತ್ರೆಗೆ ತಹಸೀಲ್ದಾರ್ ಕೃಷ್ಣ, ಆರ್‌ಐ ರವಿಚಂದ್ರ ಭೇಟಿ ನೀಡಿದ್ದರು.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.