ಮೈಸೂರು

ಕೃಷಿ ಉತ್ಸವಕ್ಕೆ ಡಾ. ವೀರೇಂದ್ರ ಹೆಗ್ಗಡೆ

Published On :

ಕೆ.ಆರ್. ನಗರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮತ್ತು ರೈತರ ಸಹಯೋಗದೊಂದಿಗೆ ಫೆಬ್ರವರಿ ತಿಂಗಳು ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆಯಲಿರುವ ಕೃಷಿ  ಉತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಉತ್ಸವ ಸಮಿತಿಯ ಪದಾಧಿಕಾರಿಗಳು ಆಹ್ವಾನಿಸಿದರು.
ಸಮಿತಿಯ ಅಧ್ಯಕ್ಷರು ಆಗಿರುವ ಎಪಿಎಂಸಿ ಅಧ್ಯಕ್ಷ ಎಂ.ರಮೇಶ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ತೆರಳಿದ ಪದಾಧಿಕಾರಿಗಳು, ಕೃಷಿ ಉತ್ಸವದ ಮಾಹಿತಿ ನೀಡಿದರಲ್ಲದೆ, ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಸಲಹೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.
ಪದಾಧಿಕಾರಿಗಳ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವೀರೇಂದ್ರ ಹೆಗ್ಗಡೆಯವರು, ಚುನಾಯಿತ ಜನಪ್ರತಿನಿಧಿಗಳು ಮುಖಂಡರು ಮತ್ತು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಕಾಲದಲ್ಲಿ ಸಮಿತಿಯ ಸಭೆಗಳನ್ನು ನಡೆಸಿ, ರೈತ ಪರ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಸೇರಿದಂತೆ ಇತರ ಸಂವಾದ, ವಿಚಾರಗೋಷ್ಠಿಗಳನ್ನು ನಡೆಸಿ ಎಂದು ಸಮಿತಿಯ ಮುಖಂಡರಿಗೆ ಸಲಹೆ ನೀಡಿದರು.
ಕೃಷಿ ಉತ್ಸವದಿಂದ ಕೆ.ಆರ್.ನಗರ ತಾಲೂಕಿನ ರೈತರಿಗೆ ಆಧುನಿಕ ಕೃಷಿ ಪದ್ಧತಿ, ಮಿಶ್ರ ಬೇಸಾಯ ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳು ಮತ್ತು ಲಾಭದಾಯಕ ಬೆಳೆಗಳನ್ನು ಬೆಳೆಯುವ ಬಗ್ಗೆ ವಿಜ್ಞಾನಿಗಳಿಂದ ತರಬೇತಿ ಮತ್ತು ಸಲಹೆ ಕೊಡಿಸಿ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತಿಳಿಸಿದರು.
ಪ್ರಚಾರ ಸಮಿತಿ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ, ಕಾರ್ಯದರ್ಶಿ ನಾಗೇಶ್, ಸಮಿತಿಯ ಉಪಾಧ್ಯಕ್ಷ ಎಸ್. ಸಿದ್ದೇಗೌಡ, ಕಾರ್ಯದರ್ಶಿ ಪ್ರಭಾಕರ್ ಜೈನ್, ಪದಾಧಿಕಾರಿಗಳಾದ ತೋಟಪ್ಪನಾಯಕ, ಸುನಯ್‌ಗೌಡ, ಮಂಚನಹಳ್ಳಿ ಶಿವಣ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾ. ಯೋಜನಾಧಿಕಾರಿ ಬಿ. ಅಶೋಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.