ಮೈಸೂರು

ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ

Published On :

ಪಿರಿಯಾಪಟ್ಟಣ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೂಲಕ ಯುಪಿಎ-3 ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿಕೊಟ್ಟದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಆಡಳಿತ ನಡೆಸಿದ ಇತರೆ ಪಕ್ಷಗಳ ಸಾಧನೆ ಶೂನ್ಯವಾಗಿದೆ. ಕಾಂಗ್ರೆಸ್‌ನ ಕೊಡುಗೆ ದೇಶಕ್ಕೆ ಅಪಾರವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವು ಶತಸಿದ್ದ ಎಂದು ಹೇಳಿದರು.
ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ರಾಹುಲ್‌ಗಾಂಧಿ ಅವರು ಯುವಕರನ್ನು ತಮ್ಮತ್ತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ದೇಶದ ಆಂತರಿಕ ಭದ್ರತೆ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಸಂಸದ ಎಚ್.ವಿಶ್ವನಾಥ್, ಶಾಸಕ ವಾಸು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್‌ಚಂದ್ರು, ಕುಂಜಪ್ಪ ಕಾರ್ನಾಡ್, ಕೆಪಿಸಿಸಿ ಸದಸ್ಯ ಡಿ.ಟಿ. ಸ್ವಾಮಿ, ಜಿಪಂ ಮಾಜಿ ಸದಸ್ಯರಾದ ರಾಜಶೇಖರ್, ಜವರಪ್ಪ, ಪಪಂ ಸದಸ್ಯರಾದ ಅನಿತಾ, ಸುವರ್ಣ, ತ್ರಿನೇಶ್, ಸಣ್ಣಪ್ಪ, ಮುಖಂಡರಾದ ಡಾ.ಬಿ.ಜೆ. ವಿಜಯಕುಮಾರ್, ಅಣ್ಣಯ್ಯ, ಜಯಣ್ಣ, ಪಿ.ಮಹದೇವ್, ರಾಮು, ಬಿ.ಜೆ. ಬಸವರಾಜ್, ಮಹಮದ್‌ಷಫಿ, ಮಹದೇವ್, ಮಂಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.