ಮೈಸೂರು

ಸರ್ಕಾರಿ ಕೆರೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ

Published On :

ಪಿರಿಯಾಪಟ್ಟಣ: ಒತ್ತುವರಿಯಾಗಿರುವ ಸರ್ಕಾರಿ ಕೆರೆ ಕಟ್ಟೆಗಳನ್ನು ನಿರ್ದಾಕ್ಷಿಣ್ಯವಾಗಿ ಕಾನೂನಿನ ಚೌಕಟ್ಟಿನಲ್ಲಿ ತೆರವುಗೊಳಿಸಲಾಗುವುದು ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ಪಟ್ಟಣಕ್ಕೆ ಹೊಂದಿಕೊಂಡಂತಿರುವ ಚಿಕ್ಕರಸನಕೆರೆ ಒತ್ತುವರಿ ಜಾಗಕ್ಕೆ ಭೇಟಿ ನೀಡಿ ಒತ್ತುವರಿಯ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಜಾಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದ್ದು, ಕೆರೆಗಳ ಒತ್ತುವರಿ ಜಾಗಗಳನ್ನು ಪರಿಶೀಲಿಸಿ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಮೀಪದ ಮೆಲ್ಲಹಳ್ಳಿ ಗ್ರಾಮದ ಸರ್ವೆ ನಂ.107 ರಲ್ಲಿ 36.13 ಎಕರೆ ಕೆರೆ ಜಾಗ, ಸರ್ವೆ ನಂ.114 ರಲ್ಲಿ 5.32 ಎಕರೆ ಜಾಗ, ಸರ್ವೆ ನಂ.100 ರಲ್ಲಿ ಒಂದು ಎಕರೆಗೂ ಹೆಚ್ಚಿರುವ ಜಾಗಗಳ ಸರ್ವೆ ನಡೆಸಿ ಇಲ್ಲಿ ಮನೆ ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ಕಟ್ಟಿಕೊಂಡಿರುವವರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು.
ಪಟ್ಟಣದ ಚಿಕ್ಕರಸನಕೆರೆ ಒತ್ತುವರಿ ಜಾಗಕ್ಕೆ ಸಂಬಂಧಿಸಿದಂತೆ ಕಂದಾಯ ನಿರೀಕ್ಷಕ ಮರಿಗೌಡ ಅವರಿಗೆ ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಅಲ್ಲದೆ ಮತ್ತಿತರೆ ಸರ್ವೆ ನಂಬರ್‌ಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕಂದಾಯ ನಿರೀಕ್ಷಕ ಪುಟ್ಟಶೆಟ್ಟಿ ಅವರಿಗೆ ಆದೇಶಿಸಿದರು.  ಸರ್ವೆಯರ್‌ಗಳಾದ ಮುನಿಯಪ್ಪ, ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಬೋಪಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.