ಸುದ್ದಿ ಸಂಕ್ಷೇಪ
ಸಚಿವರ ಪ್ರವಾಸ
ಮೈಸೂರು: ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಸಚಿವ ದಿನೇಶ್ ಗುಂಡೂರಾವ್ ಅವರು ಫೆ.1 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಅಂದು ಬೆಳಗ್ಗೆ 10ಕ್ಕೆ ಅವರು ಸುತ್ತೂರು ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದ ಸಾಂಸ್ಕೃತಿಕ ಮೇಳದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 12.30ಕ್ಕೆ ರಸ್ತೆ ಮೂಲಕ ಚಾಮರಾಜನಗರ ಜಿಲ್ಲೆಗೆ ನಿರ್ಗಮಿಸುವರು.
ಹಲವರಿಗೆ ಡಾಕ್ಟರೇಟ್
ಡಾ.ಪಿ. ಪದ್ಮಾವತಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ದೊರೆಸ್ವಾಮಿ ಅವರಿಗೆ ಜೈನಾಲಜಿ ಮತ್ತು ಪ್ರಾಕೃತ, ಡಾ.ಜಿ.ಎ. ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ಎಚ್.ಬಿ. ಗುರುರಾಜ್ ಅವರಿಗೆ ಜೈವಿಕ ತಂತ್ರಜ್ಞಾನ ಹಾಗೂ ಡಾ.ಕೆ.ಎಸ್.ಎಂ.ಎಸ್ ರಾಘವರಾವ್ ಅವರ ಮಾರ್ಗದರ್ಶದಲ್ಲಿ ಸಂಶೋಧನೆ ನಡೆಸಿದ ಎಂ.ಸಿ. ಮಧುಸೂದನ್ ಅವರಿಗೆ ಜೈವಿಕ ತಂತ್ರಜ್ಞಾನ ವಿಷಯಕ್ಕೆ ಮೈಸೂರು ವಿವಿ ಪಿಎಚ್.ಡಿ ಪದವಿ ನೀಡಿದೆ. ಮಧುಸೂದನ್ ಕೆ.ಆರ್. ನಗರ ತಾಟಿಡಿ ಮೂಡಲಬೀಡು ಗ್ರಾಮದವರು.
ಪರಿಶೀಲನಾ ಪಟ್ಟಿ ಪಡೆಯಲು ಸೂಚನೆ
ತಾಲೂಕಿನ ವ್ಯಾಪ್ತಿಯಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಿಗೆ ಶಾಲಾ ಮುಖ್ಯೋಪಾಧ್ಯಾಯರು ನಿಗದಿತ ನಮೂನೆಯನ್ನು ತಾಲೂಕಿನ ಸಮಾಜ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಿ ಪರಿಶೀಲನಾ ಪಟ್ಟಿಯನ್ನು ಜ.31 ರೊಳಗಾಗಿ ಪಡೆದುಕೊಳ್ಳಬಹುದು. ದೂ. 2520910, ಮೊ. 9141464475 ಸಂಪರ್ಕಿಸುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

