ಮೈಸೂರು

ಮುಂದುವರಿದ ದಸಂಸ ಪ್ರತಿಭಟನೆ

Published On :

ನರಸೀಪುರ: ತಹಸೀಲ್ದಾರರನ್ನು ಅಮಾನತುಗೊಳಿಸಿ, ದಲಿತ ಮುಖಂಡರ ಮೇಲಿನ ಸುಳ್ಳು ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಿದರು. ತಾಲೂಕು ಕಚೇರಿ ಆವರಣದಲ್ಲಿ ಕಳೆದ ಜ.25 ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿ ಆರಂಭಿಸಿರುವ ದಸಂಸ ಕಾರ್ಯಕರ್ತರು ಹಾಗೂ ಮುಖಂಡರು ಜೀತದಾಳು ಶಿವಕುಮಾರ್ ಆತ್ಮಹತ್ಯೆ ಪ್ರಕರಣದ ಆರೋಪಿಯನ್ನು ಬಂಧಿಸಿ, ನೀಡಿದ್ದ ಭರವಸೆಯನ್ನು ಈಡೇರಿಸಬೇಕು. ದಸಂಸ ಮುಖಂಡರ ಮೇಲಿನ ಮೊಕದ್ದಮೆ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿದ್ದಾರೆ.  ಆಲಗೂಡು ಶಿವಕುಮಾರ್, ಕುಕ್ಕೂರು ಕೆ.ರಾಜು, ಮಹದೇವಯ್ಯ, ಸೋಮಶೇಖರ್ ಇದ್ದರು.
ಕೆಲಸಕ್ಕೆ ಅಡ್ಡಿಪಡಿಸಿದ್ದಕ್ಕೆ ಪ್ರಕರಣ ದಾಖಲು
ತಾಲೂಕು ಕಚೇರಿಗೆ ಬೀಗ ಹಾಕಿ ಸಿಬ್ಬಂದಿಯನ್ನು ಒಳಬಿಡದೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದರಿಂದ ದಸಂಸದ ನಾಲ್ವರ ವಿರುದ್ಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ ಎಂದು ತಹಸೀಲ್ದಾರ್ ಎಚ್.ಎಸ್. ಅರುಣಪ್ರಭ ಹೇಳಿದ್ದಾರೆ. ಜ.6 ರಂದು ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದ ದಲಿತ ಮುಖಂಡರು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ತಾವು ಸೇರಿದಂತೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಅವಾಚ್ಯ ಪದಗಳನ್ನು ಬಳಸಿ ಬೈದಿದ್ದ ಹಿನ್ನೆಲೆಯಲ್ಲಿ ಎಸ್ಪಿ ಸೂಚನೆ ನೀಡಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.