ಮೈಸೂರು

ವಿದ್ಯುತ್ ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ

Published On :

ಮೈಸೂರು: ಸರ್ಕಾರದ ಸವಲತ್ತು ಪಡೆದ ಅಧಿಕಾರಿಗಳು ಜಾಗರೂಕರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಡಿ. ಕಿರಣ್ ಹೇಳಿದರು.
ತಾಲೂಕಿನ ಕಡಕೊಳದ ಎಂಜಿನಿಯರ್‌ಗಳ ಸಂಘದಲ್ಲಿ ಸೆಸ್ಕ್ ಅಧಿಕಾರಿ ಮತ್ತು ಸಿಬ್ಬಂದಿಗೆ ಏರ್ಪಡಿಸಿದ್ದ ಮಾಹಿತಿ ಹಕ್ಕು ಅಧಿನಿಯಮ 2005 ಮತ್ತು ವಿದ್ಯುತ್ ಸುರಕ್ಷತಾ ಕ್ರಮ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಸವಲತ್ತು ಪಡೆಯುವ ತಾವು ಜಾಗರೂಕರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿ ಹಾಗೂ ಆಳವನ್ನು ಸಮಗ್ರವಾಗಿ ತಿಳಿಯಬೇಕು. ವಿದ್ಯುತ್ ಸುರಕ್ಷತೆಗೆ ಹೆಚ್ಚಿನ ಆದತ್ಯೆ ನೀಡಿ, ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜೆಎಸ್‌ಎಸ್ ಕಾನೂನು ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ಮತ್ತು ಉಪಾಧ್ಯಾಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಮಾಹಿತಿ ನೀಡಿದರು.
ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕ ಭಾಗ್ಯ ನಾಯಕ್, ಆರ್ಥಿಕ ಸಲಹೆಗಾರ ಶಿವಣ್ಣ, ಪ್ರಧಾನ ವ್ಯವಸ್ಥಾಪಕ ಸೋಮಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.