ಕೊನೆ ದಿನ ಎಣಿಸುತ್ತಿರುವ ಯುಪಿಎ
ಕೆ.ಆರ್. ನಗರ: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಯುಪಿಎ ಸರ್ಕಾರ ದೇಶದ ಭದ್ರತೆ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ವಿಫಲವಾಗಿದ್ದು, ತನ್ನ ಅಧಿಕಾರದ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹೇಮಂತ್ಕುಮಾರ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದ ಗಣಪತಿ ದೇವಾಲಯದ ಮುಂದೆ ಮನೆ-ಮನೆಗೆ ಬಿಜೆಪಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿರುವ ಕಾಂಗ್ರೆಸ್ ಪಕ್ಷ ತಿರಸ್ಕರಿಸಿ ಅಭಿವೃದ್ಧಿಯ ಹರಿಕಾರರಾಗಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಅಟಲ್ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾಗಿದ್ದಾಗ ಇದ್ದ ಅಭಿವೃದ್ಧಿಯ ವೇಗ ನಂತರ ಬಂದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕುಟುಂಬ ರಾಜಕರಣದಲ್ಲಿ ಮುಳುಗಿರುವವರಿಗೆ ದೇಶದ ಜನತೆ ತಕ್ಕ ಪಾಠ ಕಲಿಸಲು ಕಾದಿದ್ದಾರೆಂದು ಲೇವಡಿ ಮಾಡಿದರು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ತಾ. ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಮಾತನಾಡಿದರು. ಉಪಾಧ್ಯಕ್ಷ ಕೆಗ್ಗರೆ ಸುರೇಶ್, ನಂಜುಂಡಸ್ವಾಮಿ, ಕೆ.ಎಸ್. ಸುರೇಶ್, ಕಾರ್ಯದರ್ಶಿಗಳಾದ ಮಹೇಶ್, ಪ್ರವೀಣ್, ಯುವ ಮೋರ್ಚಾ ಅಧ್ಯಕ್ಷ ಅನಿಲ್ಕುಮಾರ್, ವಕ್ತಾರ ರವೀಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ, ಒಬಿಸಿ ಮೋರ್ಚಾ ಅಧ್ಯಕ್ಷ ಮುಕ್ಕೋಟಿ, ರೈತ ಮೋರ್ಚಾ ಅಧ್ಯಕ್ಷ ಎಂ.ಸಿ. ಪಾಲಾಕ್ಷ, ರಾಜ್ಯ ಪರಿಷತ್ ಸದಸ್ಯ ಶಶಿಧರ್ ಮೂರ್ತಿ, ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ನಾಯಕ್, ಮುಖಂಡರಾದ ಲಲಿತಾಬಾಯಿ, ಮೀನಾಕ್ಷಿ, ಉಮೇಶ್, ಭಾಸ್ಕರ್, ಕಾಳಿಂಗರಾಜು, ಜಗನ್ನಾಥ್, ರಾಚಪ್ಪ, ರೇವಣ್ಣ, ನಂಜುಂಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

