ಮೈಸೂರು

ದೇಶದ ಅಭಿವೃದ್ಧಿಗೆ ರಾಜಕೀಯವೇ ಮುಖ್ಯವಲ್ಲ: ಪ್ರೊ. ರಂಗಪ್ಪ

Published On :

ಮೈಸೂರು: ಈ ದೇಶದ ಸರ್ವತೋಮುಖ ಅಭಿವೃದ್ಧಿ ರಾಜಕೀಯ ಇಚ್ಚಾಶಕ್ತಿಯೇ ಮುಖ್ಯವಲ್ಲ. ಜತೆಗೆ ವಿಜ್ಞಾನಿಗಳು, ಅರ್ಥಶಾಸ್ತ್ರಜ್ಞರು ಹಾಗೂ ಪ್ರಾಧ್ಯಾಪಕರ ಸಹಭಾಗಿತ್ವವೂ ಅವಶ್ಯವಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಭಿಪ್ರಾಯಪಟ್ಟರು.
ಮೈಸೂರು ವಿವಿ ವಾಣಿಜ್ಯ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ 10 ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲದಕ್ಕೂ ರಾಜಕೀಯ ಕ್ಷೇತ್ರವನ್ನು ಕೇಂದ್ರೀಕರಿಸಬಾರದು. ಇತರೆ ವರ್ಗಗಳತ್ತ ಕಣ್ಣು ಹಾಯಿಸಬೇಕು. ಹೀಗಾಗಿ ಜ್ಞಾನ ಪಸರಿಸುವ ವಿವಿಗಳ ಕೆಲಸ ಇಂತಹ ಸಂದರ್ಭದಲ್ಲಿ ತುಂಬಾ ಮಹತ್ವ ಪಡೆದುಕೊಳ್ಳಲಿದ್ದು, ಸಂಶೋಧಕರು, ಪ್ರಾಧ್ಯಾಪಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದರು.
ಭಾರತ ಸುಸಂಸ್ಕೃತ ದೇಶ. ನಾನು ಹಲವಾರು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ. ಆದರೆ, ನಮ್ಮ ದೇಶದ ಸಂಸ್ಕೃತಿ ಬಗೆಗೆ ನನಗೆ ಹೆಮ್ಮೆ ಇದೆ. ಇದನ್ನು ಉಳಿಸಿ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಸಂಶೋಧಕರು ಪ್ರಾಮಾಣಿಕ ಪ್ರಯತ್ನದಿಂದ ದೇಶಕ್ಕೆ ಕೊಡುಗೆ ನೀಡಬೇಕು. ವಿವಿಗಳು ಒದಗಿಸುವ ಸವಲತ್ತುಗಳನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಂಡು ಸರ್ವಜನರ ಉನ್ನತಿಗೆ ಚಿಂತಿಸಬೇಕು ಎಂದು ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಎಚ್. ರಾಜಶೇಖರ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ನಿಕಾಯದ ಡೀನ್ ಪ್ರೊ.ಬಿ.ಎಚ್. ಸುರೇಶ್, ಐಸಿಎಸ್ಎಸ್ಆರ್ ಕಾರ್ಯಕ್ರಮದ ನಿರ್ದೇಶಕ ಡಾ.ಬಿ. ನಾಗರಾಜು ಇದ್ದರು. ಹತ್ತು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ 28 ಮಂದಿ ವಿಷಯ ತಜ್ಞರು ವಿಚಾರ ಮಂಡಿಸುವರು. ಪಶ್ಚಿಮ ಬಂಗಾಳ, ಹೈದರಾಬಾದ್, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ವಿಶಾಖಪಟ್ಟಣಂ, ರಾಜ್ಯದ ಗುಲ್ಬರ್ಗ, ಮಂಗಳೂರು ಸೇರಿದಂತೆ ವಿವಿಧ ಪ್ರದೇಶದಿಂದ ಒಟ್ಟು 30 ಮಂದಿ ಸಂಶೋಧಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.