ನರೇಂದ್ರ ಮೋದಿಯೇ ಮುಂದಿನ ಪ್ರಧಾನಿ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಜ. 29
ದೇಶದಲ್ಲಿ ಪ್ರಥಮ ಬಾರಿಗೆ ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯಾದ ನರೇಂದ್ರ ಮೋದಿ ಅವರು ಪ್ರಧಾನಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಮನೆ ಮನೆಗೆ ಬಿಜೆಪಿ ನಡಿಗೆ ಹಾಗೂ ಲೋಹ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಪ್ರಧಾನಿ ಮನಮೋಹನ್ಸಿಂಗ್ ನಿಷ್ಪ್ರಯೋಜಕ ಪ್ರಧಾನಿಯಾಗಿದ್ದು, ಪ್ರಸಕ್ತ ಪರಿಸ್ಥಿತಿಯಲ್ಲಿ ದೇಶದಲ್ಲಿ ತಲೆದೂರಿರುವ ಅನೇಕ ಸಮಸ್ಯೆಗಳಿಗೆ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ದೊಡ್ಡ ಪ್ರಮಾಣದ ಹಗರಣಗಳೇ ನಡೆದಿದ್ದು, ಕೇಂದ್ರ ಸರ್ಕಾರದಲ್ಲಿ ದಲ್ಲಾಳಿಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿರು. ಅಲ್ಲದೆ, ಬಿಜೆಪಿಗೆ ಮತ ನೀಡುವ ಮೂಲಕ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿಯನ್ನಾಗಿಸುವಂತೆ ಮನವಿ ಮಾಡಿದರು.
ತಾ. ಅಧ್ಯಕ್ಷ ಆರ್.ಟಿ. ಸತೀಶ್ ಮಾತನಾಡಿದರು. ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಾದ ಮೈ.ವಿ. ರವಿಶಂಕರ್, ಕೃಷ್ಣೇಗೌಡ, ಎಂ.ಎಂ. ರಾಜೇಗೌಡ, ಪುಟ್ಟಸ್ವಾಮಿ, ಪ್ರಸನ್ನಕೇಶವ, ಕೃಷ್ಣಪ್ರಸಾದ್, ಕೆ.ಕೆ. ಶಶಿ, ಪಿ.ಜೆ. ರವಿ, ಸುದರ್ಶನ್, ರವಿ, ಅಣ್ಣೇಗೌಡ, ಲೋಕಪಾಲಯ್ಯ, ಪಿ.ಟಿ. ವೇಣುಗೋಪಾಲ್, ವಿಕ್ರಂರಾಜ್, ಪಿ.ಬಿ. ಶ್ರೀನಿವಾಸ್, ಟಿ. ರಮೇಶ್, ಶಿವಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

