ಗಣ್ಯರ ಹೆಸರಲ್ಲಿ ವಂಚನೆ: ವ್ಯಕ್ತಿ ಸೆರೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಗಣ್ಯರ ಹೆಸರು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಲಕ್ಷ್ಮಿಪುರಂ ಠಾಣೆ ಪೊಲೀಸರು ಗುರುವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಿ. ನರಸೀಪುರದ ನಿವಾಸಿ ರಾಮಸ್ವಾಮಿ ಎಂಬವರ ಪುತ್ರ ವೇಲುಸ್ವಾಮಿ (52) ಬಂಧಿತ ಆರೋಪಿ. ಈತನು ಕೆಲಸ ಹುಡುಕುವ ನಿರುದ್ಯೋಗಿಗಳನ್ನು, ಅಮಾಯಕರನ್ನು ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ.
ತನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಕೇಂದ್ರ ರೇಲ್ವೆ ಸಚಿವರು, ಕೈಗಾರಿಕಾ ಸಚಿವರು ಸೇರಿ ಇನ್ನಿತರೆ ರಾಜಕೀಯ ಮುಖಂಡರ ಪರಿಚಯವಿದೆ. ಹಣ ಕೊಟ್ಟರೆ ಮೈಮುಲ್, ರೇಲ್ವೆ ಸೇರಿದಂತೆ ವಿವಿಧೆಡೆ ಕೆಲಸ ಕೊಡಿಸುವುದಾಗಿ ಹೇಳುತ್ತಿದ್ದಾಗಿ ಹೂಟಗಳ್ಳಿ ಕೆಎಚ್ಬಿ ಕಾಲೋನಿ ಚಂದ್ರಪ್ಪ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಮುಲ್ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ನನ್ನನ್ನು ನಂಬಿಸಿ ಹಾರ್ಡಿಂಜ್ ವೃತ್ತದ ಬಳಿ ಬರಲು ತಿಳಿಸಿದ್ದ. ಅದರಂತೆ ಹಾರ್ಡಿಂಜ್ ವೃತ್ತಕ್ಕೆ ಹೋದಾಗ ಆತ ಕುಡಿದು ಮಲಗಿದ್ದ. ಆತನನ್ನು ಉಪಾಯವಾಗಿ ಮಹಾರಾಜ ಕಾಲೇಜು ಮೈದಾನದ ಬಳಿಗೆ ಚಂದ್ರಪ್ಪ ಅವರು ಕರೆದುಕೊಂಡು ಬಂದಿದ್ದಾರೆ. ನಂತರ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವೇಲುಸ್ವಾಮಿಯನ್ನು ಪೊಲೀಸರು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

