ಮೈಸೂರು

ಟಿ. ನರಸೀಪುರದಲ್ಲೂ ಮೆರವಣಿಗೆ

Published On :

ಟಿ. ನರಸೀಪುರ: ಬಗರ್ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಸರ್ಕಾರಿ ಅತಿಥಿಗೃಹದ ಮುಂಭಾಗ ಜಮಾವಣೆಗೊಂಡ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ಭೂರಹಿತರಿಗೆ ರಾಜ್ಯ ಸರ್ಕಾರ ಭೂಮಿ ನೀಡಲು ಬಗರ್ಣಹುಕುಂ ಸಾಗುವಳಿ ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿದರು.
ಕಾಲೇಜು ಜೋಡಿ ರಸ್ತೆಯ ಮಾರ್ಗವಾಗಿ ತಾಲೂಕು ಕಚೇರಿಗೆ ತೆರಳಿ ಉಪ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಭೂ ನ್ಯಾಯ ಮಂಡಳಿ ರಚನೆ ಮಾಡಿ, ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು ಹಾಗೂ ಸಾಗುವಳಿ ಸಕ್ರಮ ವಂಚಿತರಿಗೆ ಅರ್ಜಿ ಸಲ್ಲಿಸಲು ಮರು ಅವಕಾಶವನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಮರಿಮಹದೇವಯ್ಯ, ಕಾರ್ಯದರ್ಶಿ ಮೂರ್ತಿ, ಕ್ಷೇತ್ರ ಉಪಾಧ್ಯಕ್ಷ  ಮಹದೇವಸ್ವಾಮಿ,  ರಮೇಶ್, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಕಾರ್ಯದರ್ಶಿ ಚಿನ್ನಸ್ವಾಮಿ, ವಕೀಲ ರಾಜಣ್ಣ, ವಿಚಾರವಾದಿ, ಪತ್ರಕರ್ತ ಕೆ.ಎನ್. ಪ್ರಭುಸ್ವಾಮಿ, ಮುಖಂಡರಾದ ಎನ್. ಲಿಂಗಪ್ಪಾಜಿ, ಕುಮಾರ, ಶಿವಕುಮಾರ, ನಾಗರಾಜು, ರವಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.