ಆದಿವಾಸಿ ಅರಣ್ಯ ಹಕ್ಕಿಗೆ ಆಗ್ರಹಿಸಿ ಪ್ರತಿಭಟನೆ
ಎಚ್.ಡಿ. ಕೋಟೆ: ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಕೂಡಲೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ತಾಲೂಕು ಬುಡಕಟ್ಟು ಕೃಷಿಕರ ಸಂಘ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕ, ಪ್ರಗತಿಪರ ಆದಿವಾಸಿ ಸಂಘಟನೆಗಳು, ಹಾಡಿ ಅರಣ್ಯ ಹಕ್ಕು ಸಮಿತಿ, ಸಮತಾ ಜನರ ಶಿಕ್ಷಣಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಸಂಘಟನಾ ಕಾರ್ಯದರ್ಶಿ ಬಿ. ಕಾವೇರಾ, 1834 ರಲ್ಲಿ ಬ್ರಿಟಿಷರು ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದರು.
ನಂತರ 1864ರಲ್ಲಿ ಅರಣ್ಯ ಇಲಾಖೆಯನ್ನು ಪ್ರಾರಂಭಿಸಿ ಅರಣ್ಯ ಇಲಾಖೆ ಹಾಗೂ ಆದಿವಾಸಿಗಳ ನಡುವಿನ ಸಂಬಂಧವನ್ನು ಹಾಳು ಮಾಡಿ ತಪ್ಪೆಸಗಲಾಗಿದೆ.
ಈಗ ಸರ್ಕಾರ ಪಾರಂಪರಿಕವಾಗಿ ಅನುಭವಿಸಿಕೊಂಡು ಬಂದಿರುವ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು. ಆದಿವಾಸಿ ಅರಣ್ಯ ಹಕ್ಕಿನಲ್ಲಿ ಕಿರು ಅರಣ್ಯ ಸಂಪನ್ಮೂಲಗಳನ್ನು ಸಂಗ್ರಹಿಸಿ, ಬಳಸಿ ಮಾರಾಟ ಮಾಡಲು ಕಾನೂನಿನಲ್ಲಿ ಮುಕ್ತ ಅವಕಾಶ ಇದ್ದರೂ ಸಹ ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ವಿವಿಧ ಹಾಡಿಗಳ ಜನರ ಮೇಲೆ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸಿ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಸವರಾಜು, ಜಯರಾಮ್, ಸಿದ್ದರಾಜು, ರಾಜು, ಬಸವರಾಜು, ಶೈಲೇಂದ್ರ, ವಿಜಯಕುಮಾರ್,ರಾಜು, ತೋಲಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

