ಎಚ್.ಡಿ. ಕೋಟೆಯಲ್ಲೂ ಬಿಎಸ್ಪಿ ಪ್ರತಿಭಟನೆ
ಎಚ್.ಡಿ. ಕೋಟೆ: ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಿ- ಭೂ ರಹಿತರಿಗೆ ಭೂಮಿ ಕೊಡಿ ಎಂದು ಒತ್ತಾಯಿಸಿ ಬಿಎಸ್ಪಿ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.
ಪ್ರತಿಭಟನಾ ನಿರತರನ್ನು ಉದ್ದೇಶಿ ಮಾತನಾಡಿದ ಜಿಲ್ಲಾಧ್ಯಕ್ಷ ಭೀಮನಹಳ್ಳಿ ಸೋಮೇಶ್, ಭೂರಹಿತ ಪ.ಜಾತಿ, ಪ.ಪಂಗಡ ಮತ್ತು ಹಿಂದುಳಿದವರು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕುಗಳಲ್ಲಿ ತಮ್ಮ ಜೀವನಕ್ಕಾಗಿ ಸುಮಾರು 40 ವರ್ಷದಿಂದ ಅಕ್ರಮವಾಗಿ ಬಗರ್ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, ಭೂಮಿಯನ್ನು ಸಕ್ರಮಗೊಳಿಸಿಕೊಡಬೇಕೆಂದು ಕೋರಿ ಅರ್ಜಿ ಸಲ್ಲಿಸಿ 30 ವರ್ಷ ಕಳೆದರೂ ನಮ್ಮ ಬೇಡಿಕೆ ಈಡೇರಿಲ್ಲ ಎಂದು ಆರೋಪಿಸಿದರು.
ಭೂ ರಹಿತರಿಂದ ಓಟು ಪಡೆದ ಕಾಂಗ್ರೆಸ್ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದರೂ, ರೈತರಿಗೆ ಹಕ್ಕು ಪತ್ರ ನೀಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಸರ್ಕಾರ ಕೂಡಲೆ ಕಾರ್ಯೋನ್ಮೂಖವಾಗಿ ವಿ. ಬಾಲಸುಬ್ರಮಣಿಯನ್ ಸಮಿತಿ ವರದಿಯನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಯೋಜಕ ಶಿವಮಹದೇವು, ಉಪಾಧ್ಯಕ್ಷ ನಾಗರಾಜು, ಪ್ರಧಾನ ಕಾರ್ಯದರ್ಶಿ ಪ್ರಭುಸ್ವಾಮಿ, ಖಜಾಂಚಿ ರಾಜು, ಕಚೇರಿ ಕಾರ್ಯದರ್ಶಿ ಚಂದ್ರಶೇಖರ್. ತಾಲೂಕು ಸಂಯೋಜಕ ಮಹದೇವ್ಕುಮಾರ್, ಅಧ್ಯಕ್ಷ ರವೀಂದ್ರ ಮಲಾರ, ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

