ಮೈಸೂರು

ದಲಿತ ಮುಖಂಡ ಹತ್ಯೆ: ಪ್ರತಿಭಟನೆ

Published On :

ಕ.ಪ್ರ.ವಾರ್ತೆ    ಮೈಸೂರು    ಜ. 30
ಮಾದಿಗ ಮೀಸಲಾತಿ ಹೋರಾಟಗಾರ ಹಾಗೂ ದಲಿತ ಮುಖಂಡ ದೇವೇಂದ್ರಪ್ಪ ದಳಪತಿ ಅವರ ಹತ್ಯೆ ಖಂಡಿಸಿ ಮಾದಿಗ ಮೀಸಲಾತಿ ಆಂದೋಲನ ವಿದ್ಯಾರ್ಥಿ ವೇದಿಕೆ ಪದಾಧಿಕಾರಿಗಳು ಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕನ್ಯಾಕೋಳ ಗ್ರಾಮದಲ್ಲಿ ದೇವೇಂದ್ರಪ್ಪ ದಳಪತಿ ಅವರನ್ನು ಕಾಣದ ಕೈಗಳು ಸಂಚು ರೂಪಿಸಿ, ಹಬ್ಬದಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಅವರನ್ನು ಗುರಿಯಾಗಿಸಿಕೊಂಡು ಹಿಂದುಳಿದ ವರ್ಗದವರು ಹತ್ಯೆ ಮಾಡಿದ್ದಾರೆ. ಈ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ದೇವೇಂದ್ರಪ್ಪ ಅವರ ಕುಟುಂಬಕ್ಕೆ ಈಗ ನೀಡಿರುವ ಪರಿಹಾರದ ಜೊತೆಗೆ ಇನ್ನೂ 15 ಲಕ್ಷ ರು. ಪರಿಹಾರ ಒದಗಿಸಬೇಕು. ಗಾಯಗೊಂಡವರಿಗೆ ತಲಾ 5 ಲಕ್ಷ ರು. ಪರಿಹಾರ ನೀಡಬೇಕು. ಬಡ ದೇವೇಂದ್ರಪ್ಪರ ಕುಟುಂಬಕ್ಕೆ 5 ಎಕರೆ, ಗಾಯಗೊಂಡವರಿಗೆ ತಲಾ 2 ಎಕರೆ ಜಮೀನು ನೀಡಬೇಕು. ಇವರ ಕುಟುಂಬದ ಯಾರಿಗಾದರೂ ಒಬ್ಬರಿಗೆ ರಾಜ್ಯ, ಕೇಂದ್ರ ಸರ್ಕಾರದ ನೌಕರಿ ನೀಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಮಾದಿಗರ ಮೇಲೆ ನಡೆಯುವ ದಬ್ಬಾಳಿಕೆ ಮತ್ತು ದೌರ್ಜನ್ಯ  ತಡೆಯಬೇಕು. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ ಅಸಮಾನತೆ ಹೋಗಲಾಡಿಸಬೇಕು ಎಂದು ಅವರು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಮರಡೀಪುರ ಬಿ. ರವಿಕುಮಾರ್, ಉಪಾಧ್ಯಕ್ಷ ವೆಂಕಟರಾಜು, ಪ್ರಧಾನ ಕಾರ್ಯದರ್ಶಿ ಬಸವರಾಜು, ಕಾನೂನು ಸಲಹೆಗಾರ ಲಕ್ಷ್ಮಣ್ ಮತ್ತಿತರರು ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.