ಮೈಸೂರು

ಬಗರ್ಹುಕುಂ ಸಕ್ರಮಕ್ಕೆ ಆಗ್ರಹಿಸಿ ಮುಷ್ಕರ

Published On :

ಕೆ.ಆರ್. ನಗರ, ಜ. 30
ಪ. ಜಾತಿ ಮತ್ತು ಪಂಗಡದ ಭೂರಹಿತರು ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಸಕ್ರಮಗೊಳಿಸಲು ಅವರಿಂದ ಅರ್ಜಿ ಪಡೆದು  ಸರ್ಕಾರ ಕ್ರಮ ಕೈಗೊಂಡು ಸಾಗುವಳಿ ಪತ್ರ ನೀಡಬೇಕೆಂದು ಒತ್ತಾಯಿಸಿ ಬಹುಜನ ಪಾರ್ಟಿ ತಾಲೂಕು ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ಕುಳಿತ ಬಿಎಸ್ಪಿ ಕಾರ್ಯಕರ್ತರು  ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ಕೊಡಿ ಎಂದು ಆಗ್ರಹಿಸಿದರು.
1991 ಮತ್ತು 99ರ ಅವಧಿಯಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಹಾಗೂ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ಹಿಡುವಳಿದಾರರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ಸರ್ಕಾರ ಕೂಡಲೇ ಭೂ ನ್ಯಾಯ ಮಂಡಳಿಯನ್ನು ರಚನೆ ಮಾಡಬೇಕು, ಜತೆಗೆ ಕೆ.ಆರ್. ನಗರ ವ್ಯಾಪ್ತಿಯಲ್ಲಿರುವ ಅಕ್ರಮ ಬಡಾವಣೆಗಳನ್ನು ಸಕ್ರಮಗೊಳಿಸಿ ಬಡಾವಣೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು  ಆಗ್ರಹಿಸಿದರು.
ಬಿಎಸ್ಪಿ ಜಿಲ್ಲಾಧ್ಯಕ್ಷ ಶಿವಮಹದೇವ್, ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಪ್ರಭುಸ್ವಾಮಿ, ಪಿ. ಚಂದ್ರಶೇಖರ್, ತಾ. ಅಧ್ಯಕ್ಷ ಲೋಕೇಶ್ ಮೌರ್ಯ, ರುದ್ರಮೂರ್ತಿ, ಬಿ.ಡಿ. ಲಕ್ಷ್ಮಣ್, ಉಮೇಶ್, ದೊಡ್ಡಯ್ಯ, ಪುಟ್ಟಯ್ಯ, ಸುರೇಶ್, ಕೃಷ್ಣಯ್ಯ ಇದ್ದರು.



ಪಿರಿಯಾಪಟ್ಟದಲ್ಲಿ ಧರಣಿ
ಪಿರಿಯಾಪಟ್ಟಣ: ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ನೀಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ತಾ. ಘಟಕದ ಪದಾಧಿಕಾರಿಗಳು ಪಟ್ಟಣದ ತಾ. ಆಡಳಿತ ಭವನದ ಎದುರು ಪ್ರತಿಭಟಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ಈರಾಜ್ ಬಹುಜನ್ ಮಾತನಾಡಿದರು.ಪಕ್ಷದ ಜಿಲ್ಲಾ ಉಪಾಧ್ಯಕ್ಷ ದೇವರಾಜ್ ಮಾತನಾಡಿದರು. ಪಕ್ಷದ ಪದಾಧಿಕಾರಿಗಳಾದ ಟಿ.ಸಿ. ಸೋಮಶೇಖರ್, ಟಿ.ಎಸ್. ಶಿವರಾಜ್, ಮಂಜು, ಕೋಟಿ ಶ್ರೀನಿವಾಸ್, ಕಾಂತರಾಜು, ದೇವೇಂದ್ರಕುಮಾರ್, ಸತೀಶ್, ರಮೇಶ್, ಬಿ.ಕೆ. ಮಂಜು, ಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.