ಮೈಸೂರು

'ಕೆ'ೈ ಸರ್ಕಾರಕ್ಕೆ ಜನರ ಹಿಡಿ ಶಾಪ: ಜಿಟಿಡಿ

Published On :

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ರಾಜ್ಯ ಸುಭಿಕ್ಷವಾಗಲಿದೆ ಎಂಬ ಮಾತು ಸುಳ್ಳಾಗಿದೆ. ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.  
ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ದರ್ಶನ ಪಡೆದು ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ 8 ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುವುದು ಖಚಿತ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೋಟೆ ಶಿವಣ್ಣ ಅಥವಾ ಸಾಮ್ರಾಟ್ ಸುಂದರೇಶ್, ಮೈಸೂರು ಕ್ಷೇತ್ರದಿಂದ ಪ್ರೊ. ಮಲ್ಲಿಕಾರ್ಜುನಪ್ಪ, ಜೆಡಿಎಸ್ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪಡಿಸುವ ಸಂಕಲ್ಪದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.