ಮೈಸೂರು

ಸರಗೂರು ತಾಲೂಕು ಘೋಷಣೆಗೆ ಆಗ್ರಹ

Published On :

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಸರಗೂರು ತಾಲೂಕು ಹೋರಾಟ ಸಮಿತಿ ಆಗ್ರಹಿಸಿದೆ.
ಸರಗೂರು ವ್ಯಾಪಾರಿ ಕೇಂದ್ರವಾಗಿದ್ದು, ಇದಕ್ಕೆ ತಾಲೂಕು ಎನಿಸಿಕೊಳ್ಳುವ ಎಲ್ಲಾ ಅರ್ಹತೆಗಳು ಇವೆ. ಹೀಗಿದ್ದರೂ ಕಳೆದ 8 ವರ್ಷಗಳಿಂದ ತಾಲೂಕಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಮಿತಿ ಸದಸ್ಯ ಕೃಷ್ಣ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರಗೂರು ಈಗ 80 ಸಾವಿರ ಜನಸಂಖ್ಯೆ ಹೊಂದಿದೆ. ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಇಲ್ಲಿನ ವಾರ್ಡ್ ಸಮಿತಿಯ ಮೂಲಕವೂ ಹತ್ತಾರು ಸಾರಿ ಹೋರಾಟ ನಡೆಸಲಾಗಿದೆ ಎಂದರು.
ಚುನಾವಣೆ ಬಹಿಷ್ಕಾರ: ರಾಜಕೀಯ ಒತ್ತಡದಿಂದಾಗಿ ಸರಗೂರನ್ನು ತಾಲೂಕು ಕೇಂದ್ರವಾಗಿ ಘೋಷಿಸುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗುವುದು. ಅವರೂ ಬೇಡಿಕೆ ಈಡೇರಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಸ್ಕರಿಸಲಾಗುವುದು ಎಚ್ಚರಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.