ಮೈಸೂರು

ವಿದ್ಯಾರ್ಥಿ, ವಿಜ್ಞಾನಿ ನೇರ ಸಂವಾದ 3, 4ಕ್ಕೆ

Published On :

ಮೈಸೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಜು.3 ಮತ್ತು 4 ರಂದು ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದ ಸಿದ್ದನಂಜ ದೇಶಿಕೇಂದ್ರ ಮಂಗಳ ಮಂಟಪದಲ್ಲಿ ಕರ್ನಾಟಕ ವಿಜ್ಞಾನ ಜಾಗೃತಿ, ಮೈಸೂರು ವಲಯದ ವಿದ್ಯಾರ್ಥಿ- ವಿಜ್ಞಾನಿ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಮೈಸೂರು ಜಿಲ್ಲಾ ಸಮಿತಿ ಅಧ್ಯಕ್ಷ ಡಾ.ಬಿ.ಎಂ. ವೆಂಕಟೇಶ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಂದ ಒಟ್ಟು 400 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಆಗಮಿಸಲಿದ್ದಾರೆ. ಪ್ರತಿ ಜಿಲ್ಲೆಯಿಂದ 7 ಪ್ರೌಢಶಾಲೆಗಳಿಂದ 28 ವಿದ್ಯಾರ್ಥಿಗಳು ಮತ್ತು 7 ಶಿಕ್ಷಕರು, 3 ಕಾಲೇಜುಗಳಿಂದ 18 ವಿದ್ಯಾರ್ಥಿಗಳು ಮತ್ತು 3 ಉಪನ್ಯಾಸಕರು ಸೇರಿದಂತೆ ಒಟ್ಟು 56 ಜನರಂತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ, ಪ್ರಚಲಿತ ವಿಜ್ಞಾನ ಮತ್ತು ಮೂಲ ವಿಜ್ಞಾನ ಕುರಿತು ವಿಜ್ಞಾನಿಗಳು ಉಪನ್ಯಾಸ ನೀಡುತ್ತಾರೆ. ನಂತರ ವಿದ್ಯಾರ್ಥಿಗಳು ಆಯಾ ವಿಷಯಗಳನ್ನು ಆಧರಿಸಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಬಹುದು. ವಿಜ್ಞಾನಿಗಳಾದ ಡಾ.ಎಸ್.ಅನಂತರಾಜು, ಪ್ರೊ.ಎಂ.ಆರ್.ಎನ್. ಮೂರ್ತಿ, ಡಾ.ಎಚ್.ಎಲ್. ಭಟ್, ಡಾ.ಡಿ.ಚನ್ನೇಗೌಡ, ಡಾ.ಎಸ್. ಬಾಲಚಂದ್ರರಾವ್, ಡಾ.ವಸಂತಕುಮಾರ್ ತಿಮ್ಕಾಪುರ, ಅಧ್ಯಾಪಕ ಎಸ್. ಲೋಕೇಶ್ ಅವರು ವಿಚಾರ ಮಂಡಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು ಎಂದರು. ಜು.3ರ ಬೆಳಗ್ಗೆ 10ಕ್ಕೆ ಈ ಸಂವಾದ ಕಾರ್ಯಕ್ರಮವನ್ನು ಜ್ಞಾನ ಯೋಗಾಶ್ರವುದ ಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸುವರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜ್ಞಾನ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಎಸ್.ವಿ. ಸಂಕನೂರ ಅಧ್ಯಕ್ಷತೆ ವಹಿಸುವರು. ಜು.4ರ ಮಧ್ಯಾಹ್ನ 2.30ಕ್ಕೆ ಕೇಂದ್ರೀಯ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ಟಿ. ತಿಪ್ಪೇಸ್ವಾಮಿ ಸಮಾರೋಪ ಭಾಷಣ ಮಾಡುವರು. ವಿಶ್ರಾಂತ ಕುಲಪತಿ ಪ್ರೊ.ಪಿ. ವೆಂಕಟರಾಮಯ್ಯ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.ಮೈಸೂರು ವಲಯ ಸಂಯೋಜಕ ಸಿ. ಕೃಷ್ಣೇಗೌಡ, ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಜಿ.ಬಿ. ಸಂತೋಷ್‌ಕುಮಾರ್ ಇದ್ದರು. ಮೊ. 98444 05284, 81055 03863 ಸಂಪರ್ಕಿಸಬಹುದು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.