ಮೈಸೂರು

ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Published On :

ಬೈಲಕುಪ್ಪೆ: ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಅಬಕಾರಿ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮೀಪದ ತಿರುಮಲಾಪುರ ಗ್ರಾಮಸ್ಥರು ಪ್ರತಿಭಟಿಸಿದರು. ಬೈಲುಕುಪ್ಪೆ ಗ್ರಾಪಂ ವ್ಯಾಪ್ತಿಯ ತಿರುಮಲಾಪುರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಚಲುವರಾಜ್ ನೇತೃತ್ವದಲ್ಲಿ ಸಂಘದ ಆವರಣದಲ್ಲಿ ಸೋಮವಾರ ಗ್ರಾಮಸ್ಥರು ಪ್ರತಿಭಟಿಸಿದರು. ಗ್ರಾಮದ ಶಿವಣ್ಣನ ಮಗ ದಿವಾಕರ, ದಾಸಯ್ಯನ ಹೆಂಡತಿ ದೇವೀರಮ್ಮ, ಸಾವಿತ್ರಮ್ಮ ಎಂಬವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಹಲವಾರು ಬಾರಿ ಸಂಘದ ವತಿಯಿಂದ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದರು. ಸಂಘದ ಅಧ್ಯಕ್ಷ ಚೆಲುವರಾಜು, ಕಾರ್ಯದರ್ಶಿ ವಿಜಯ್, ಗೌರವಾಧ್ಯಕ್ಷ ಸುರೇಶ್, ಬೈಲಕುಪ್ಪೆ ಗ್ರಾಪಂ ಸದಸ್ಯ ರಾಜು, ಗ್ರಾಮದ ಮುಖಂಡರಾದ ಚಿಕ್ಕಯ್ಯ, ದೇವಯ್ಯ, ಗ್ರಾಮಸ್ಥರಾದ ಸ್ವಾಮಿ, ಚಂದ್ರ, ವೆಂಕಟೇಶ್, ಮಲ್ಲಮ್ಮ, ಶಾಂತಮ್ಮ, ರತ್ನಮ್ಮ, ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.