ಕಸಾಪದಿಂದ ಶಾಲೆಗೊಂದು ಕಾರ್ಯಕ್ರಮ
ಪಿರಿಯಾಪಟ್ಟಣ: ಶಾಲೆಯೆಡೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಡಿಗೆ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಕಸಾಪ ಶಾಲೆಗೊಂದು ಕಾರ್ಯಕ್ರಮ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸದಲ್ಲಿ ತೊಡಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಗೊರಳ್ಳಿ ಜಗದೀಶ್ ಹೇಳಿದರು.
ತಾಲೂಕಿನ ಬೆಟ್ಟದಪುರ ಗ್ರಾಮದ ಎಸ್ಸಿವಿಡಿಎಸ್ ಪ್ರೌಢಶಾಲೆಯಲ್ಲಿ ಬೆಟ್ಟದಪುರ ಕಸಾಪ ಗ್ರಾಮ ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಪ್ರತಿಭೆಗಳನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಸಾಪ ಗ್ರಾಮ ಘಟಕಗಳು ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಶತಮಾನದ ಸಂಭ್ರಮದಲ್ಲಿದ್ದು, 2014-2015ನೇ ವರ್ಷವನ್ನು ಶತಮಾನೋತ್ಸವ ವರ್ಷ ಎಂದು ಅಚರಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ. ಪ್ರತಿಯೊಬ್ಬರೂ ಕಸಾಪ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸಿ ಸಹಕರಿಸುವಂತೆ ಮನವಿ ಮಾಡಿದರು. ಬೆಟ್ಟದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕ ಕೆಂಪರಾಜು ಮಾತನಾಡಿ, ಕನ್ನಡನಾಡು, ನುಡಿ ವಿಶ್ವದಲ್ಲಿಯೇ ಶ್ರೇಷ್ಠವಾದ ಪರಂಪರೆ ಹೊಂದಿದ್ದು, ಕನ್ನಡದಲ್ಲಿರುವ ಮಹಾಕಾವ್ಯಗಳನ್ನು, ಕವಿಗಳನ್ನು ಬೇರೆ ಯಾವುದೇ ಭಾಷೆಯಲ್ಲಿಯೂ ಕಾಣಲು ಸಾಧ್ಯವಿಲ್ಲ. ಹಳ್ಳಿ-ಹಳ್ಳಿಗಳಲ್ಲಿಯೂ ಕಸಾಪ ಗ್ರಾಮ ಘಟಕಗಳನ್ನು ಸ್ಥಾಪಿಸಿ ಪ್ರತಿಭಾ ಪುರಸ್ಕಾರ ನಡೆಸುತ್ತಿರುವ ಕಸಾಪ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ಮುಖ್ಯೋಪಾಧ್ಯಾಯ ಅಶೋಕ ಮಾತನಾಡಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮತ್ತು ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಸಾಪ ಸದಸ್ಯರಾದ ರವಿ, ಮಂಜುನಾಥ್, ಅಶ್ವಥ್, ವಾಣಿಜ್ಯೋದ್ಯಮಿ ರವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

