ಮೈಸೂರು

ಸಹಾಯಧನ ನೀಡಲು ಅರ್ಜಿ ಆಹ್ವಾನ

Published On :

ನಂಜನಗೂಡು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಸ್ವ ಉದ್ಯೋಗ ಕಂಡುಕೊಳ್ಳಲು ಸಹಾಯಧನ ಮತ್ತು ಬ್ಯಾಂಕುಗಳಿಂದ ಸಹಾಯಧನ ಮಂಜೂರಾತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷದೊಳಗಿನ ಮಹಿಳೆಯರು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅವರ ವಾರ್ಷಿಕ ಆದಾಯ 40 ಸಾವಿರ ಮೀರಿರಬಾರದು. ದೈಹಿಕ ಅಂಗವಿಕಲರು, ವಿಧವೆಯರು ಆಗಿದ್ದಲ್ಲಿ ಅವರಿಗೆ ಆದಾಯದ ಮಿತಿ ಇರುವುದಿಲ್ಲ. ಸಾಮಾನ್ಯ ಹಿಂದುಳಿದ ವರ್ಗದವರಿಗೆ 7500 ಸಹಾಯಧನ ಅಥವಾ ಬ್ಯಾಂಕುಗಳು ಮಂಜೂರು ಮಾಡಿದ ಸಾಲದ ಮೊತ್ತದ ಶೇ.20 ರಷ್ಟು ಸಹಾಯಧನ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಮಹಿಳೆಯರಿಗೆ 10 ಸಾವಿರ ಅಥವಾ ಬ್ಯಾಂಕುಗಳು ಮಂಜೂರು ಮಾಡಿದ ಸಾಲದ ಮೊತ್ತದ ಶೇ.30 ರಷ್ಟು ಸಹಾಯಧನ ನೀಡಲಾಗುತ್ತದೆ. 2014-15ನೇ ಸಾಲಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಸಲ್ಲಿಸುವ ಪ್ರಮಾಣ ಪತ್ರವು ಅರ್ಜಿ ಸಲ್ಲಿಸುವ ಅವಧಿಗೆ ಸಂಬಂಧಿಸಿದ್ದಾಗಿರಬೇಕು. ನಿಗದಿತ ಅರ್ಜಿ ನಮೂನೆಗಳನ್ನು ಪಟ್ಟಣದ ಉಚಿತವಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಖುದ್ದಾಗಿ ಬಂದು ಕಚೇರಿಗೆ ಜು.14 ರೊಳಗೆ ಸಲ್ಲಿಸಬೇಕು ಎಂದು ಯೋಜನಾಧಿಕಾರಿ ತಿಳಿಸಿದ್ದಾರೆ.
ಡಾಂಬರು ಕಾಣದ ಚೌಹಳ್ಳಿ ರಸ್ತೆ
ಟಿ. ನರಸೀಪುರ: ತಾಲೂಕಿನ ಚೌಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇನ್ನೂ ಡಾಂಬರು ಕಂಡಿಲ್ಲ. ತಲಕಾಡು ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಗೆ ಐದಾರು ವರ್ಷಗಳಿಂದಲೂ ಡಾಂಬರು ಹಾಕುವುದನ್ನು ಚುನಾಯಿತ ಪ್ರತಿನಿಧಿಗಳು ಮರೆತಿದ್ದಾರೆ. ಭೈರಾಪುರ ಜಿಪಂ ಕ್ಷೇತ್ರದ ವ್ಯಾಪ್ತಿಗೆ ಸೇರುವ ಚೌಹಳ್ಳಿ ಗ್ರಾಮ ಅನೇಕ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕುವುದನ್ನು ಜಿಪಂ ಸದಸ್ಯೆ ರೇಣುಕನಾಗರಾಜು ಮರೆತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಮತ್ತು ಲೋಕೋಯೋಗಿ ಸಚಿವರನ್ನೇ ಹೊಂದಿರುವ ಜಿಪಂ ಸದಸ್ಯೆಗೆ ಮೆಟ್ಲಿಂಗ್ ಮಾಡಿದ ರಸ್ತೆ ಡಾಂಬರು ಹಾಕದಿರುವುದು ಅವರಲ್ಲಿನ ಅಭಿವೃದ್ಧಿ ಕಾಳಜಿ ತೋರಿಸುತ್ತದೆ.
ಅತ್ಯಾಚಾರ ಆರೋಪಿ ಸೆರೆ
ಹುಣಸೂರು: ತಾಲೂಕಿನ ಶೆಟ್ಟಹಳ್ಳಿ ಗಿರಿಜನ ಹಾಡಿಯಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಸೋಮ ಅಲಿಯಾಸ್ ಸೋಮಶೇಖರ್‌ನನ್ನು (25) ಪೊಲೀಸರು ತಿತಿಮತಿಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಖಾಸಗಿ ವಾಹಿನಿಯ ಹಳ್ಳಿಹೈದ ಪ್ಯಾಟೆಗೆ ಬಂದ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದ ಸೋಮ, ಭಾನುವಾರ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.