ಒಡನಾಡಿ ಪರಶುರಾಂಗೆ ಜಾಮೀನು
ಮೈಸೂರು: ಜಾತಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಒಡನಾಡಿ ಸಂಸ್ಥೆಯ ನಿರ್ದೇಶಕ ಪರಶುರಾಂ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ನಗರ ಲಕ್ಷ್ಮಿಪುರಂ ಠಾಣೆಯಲ್ಲಿ ಪರಶುರಾಂ ವಿರುದ್ಧ ಜಾತಿ ನಿಂದನೆ ಮಾಡಿರುವ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗಾಗಿ ಕೆ.ಆರ್. ಉಪ ವಿಭಾಗದ ಎಸಿಪಿ ಬಿ.ಟಿ. ಕವಿತಾ ಮತ್ತು ಸಿಬ್ಬಂದಿ, ಪರಶುರಾಂ ಅವರನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಕರೆದುಕೊಂಡು ಹೋದರು. ಈ ವೇಳೆ ಕುಸಿದು ಬಿದ್ದ ಪರಶುರಾಂ ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಈ ನಡುವೆ ಹೈಕೋರ್ಟ್ ಪರಶುರಾಂಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಾಯಕ ಸಂಘದಿಂದ ದ್ಯಾವಪ್ಪನಾಯಕ ಉಚ್ಚಾಟನೆ
ಮೈಸೂರು: ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸ್ಥಾನದಿಂದ ದ್ಯಾವಪ್ಪನಾಯಕ ಅವರನ್ನು ಉಚ್ಚಾಟಿಸಲಾಗಿದೆ ಎಂದು ರಾಜ್ಯ ಉಪಾಧ್ಯಕ್ಷ ಪಿ. ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ. ಜಿಲ್ಲೆಯ ಇಡೀ ನಾಯಕ ಜನಾಂಗದ ಹಿತರಕ್ಷಣೆಗಾಗಿ ಸ್ಥಾಪಿತವಾಗಿರುವ ವೇದಿಕೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಅಡವಿಟ್ಟಿದ್ದರು. ನಾವು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸಮಾನರೆ. ಅಲ್ಲದೆ ದ್ಯಾವಪ್ಪನಾಯಕರು ಸಂಘದ ಕಾರ್ಯಚಟುವಟಿಕೆಗಳಿಗೆ ಭಾಗವಹಿಸದೆ ಇರುವುದರಿಂದ ಅವರನ್ನು ಉಚ್ಚಾಟಿಸಲಾಗಿದೆ. ಒಂದು ವೇಳೆ ಎಲ್ಲಾದರು ವೇದಿಕೆಯ ಹೆಸರನ್ನು ಬಳಸಿಕೊಂಡರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೂತನ ಪದಾಧಿಕಾರಿಗಳ ನೇಮಕ
ಮೈಸೂರು: ಕರ್ನಾಟಕ ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್ 1960ರ ನೋಂದಣಿ ಸಂಖ್ಯೆ- ಎಂ.ವೈ.ಎಸ್.ಎಸ್. 71-2014-15ರ ಪ್ರಕಾರ ಹೊಸದಾಗಿ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಅದರಂತೆ ಅಧ್ಯಕ್ಷರಾಗಿ ಪ್ರಭಾಕರ ಹುಣಸೂರು, ಪ್ರಧಾನ ಕಾರ್ಯದರ್ಶಿಯಾಗಿ ಎನ್. ಮಾದೇಶ್, ಖಜಾಂಚಿಯಾಗಿ ಎಚ್.ಆರ್. ಪ್ರಕಾಶ್, ಸಹ ಕಾರ್ಯದರ್ಶಿಯಾಗಿ ಡಿ. ಪ್ರಕಾಶ್, ಸಂಚಾಲಕರನ್ನಾಗಿ ತಿಮ್ಮನಾಯಕ, ಸಂಘಟನಾ ಕಾರ್ಯದರ್ಶಿಯಾಗಿ ಪುಟ್ಟರಾಜು, ಕಾರ್ಯದರ್ಶಿಯಾಗಿ ಮಂಜುನಾಯಕ, ನಿರ್ದೇಶಕರಾಗಿ ನಿಂಗರಾಜ ನಾಯಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದರು.
ಬ್ಯೂಟಿಪಾರ್ಲರ್
ನಿರ್ವಹಣಾ ತರಬೇತಿ
ಮೈಸೂರು: ರುಡ್ಸೆಟ್ ಸಂಸ್ಥೆಯು 30 ದಿನಗಳ ಕಾಲ ಆಸಕ್ತ ನಿರುದ್ಯೋಗ ಯುವತಿಯರಿಗಾಗಿ ಬ್ಯೂಟಿಪಾರ್ಲರ್ ನಿರ್ವಹಣೆ ತರಬೇತಿಯನ್ನು ಜು.28 ರಿಂದ ಪ್ರಾರಂಭಿಸುತ್ತಿದೆ. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ 18 ರಿಂದ 45 ವರ್ಷದ ಒಳಗಿನ ಅರ್ಹ ನಿರುದ್ಯೋಗಿ ಯುವತಿಯರು ಕಚೇರಿ ವೇಳೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ನಿರ್ದೇಶಕರು, ರುಡ್ಸೆಟ್ ಸಂಸ್ಥೆ, ಹಿನಕಲ್ ಮುಖ್ಯರಸ್ತೆ, ಮೈಸೂರು- 17 ಅಥವಾ ದೂ. 0821- 2519663 ಅಥವಾ ಮೊ. 9449860466 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

