ಮೈಸೂರು

ಮನೆಗಳಿಗೆ ತೆರಳದಿದ್ದಲ್ಲಿ ಹಂಚಿಕೆ ರದ್ದು

Published On :

ಮೈಸೂರು: ನಗರ ಪಾಲಿಕೆಯ ಆಶ್ರಯ ಯೋಜನೆಯಡಿ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಫಲಾನುಭವಿಗಳು ಈ ಪ್ರಕಟಣೆ ಹೊರಡಿಸಿದ ತಿಂಗಳೊಳಗೆ ಅವರಿಗೆ ಹಂಚಿಕೆಯಾದ ಮನೆಗಳಿಗೆ ವಾಸಕ್ಕೆ ತೆರಳದಿದ್ದರೆ ಅಂತಹ ಫಲಾನುಭವಿಗಳ ಆಯ್ಕೆ ರದ್ದುಪಡಿಸಿ ಮನೆಗಳನ್ನು ವಶಪಡಿಸಿಕೊಳ್ಳುವುದಾಗಿ ನಗರ ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ತಿಳಿಸಿದ್ದಾರೆ.
ಕೆ.ಆರ್. ಕ್ಷೇತ್ರ ವ್ಯಾಪ್ತಿಯ ಕೊಪ್ಪಲೂರು (ರಮಾಬಾಯಿನಗರ) ಗೊರೂರು ಬ್ಲಾಕ್ ನಂ. 1,2,3,4,5,6,7 ಮತ್ತು 8ನೇ ಬ್ಲಾಕ್ಗಳು, ಚಾಮರಾಜ ಕ್ಷೇತ್ರದ ವ್ಯಾಪ್ತಿಯ ಬೋಗಾದಿ, ಮಂಡಕಳ್ಳಿ, ಶ್ರೀರಾಂಪುರ, ಹಿನಕಲ್, ಹೆಬ್ಬಾಳು, ಬಡಾವಣೆಯ ಮನೆ/ನಿವೇಶನಗಳು, ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯ ಹಂಚ್ಯಾ ಸಾತಗಳ್ಳಿ, ರಮ್ಮನಹಳ್ಳಿ ಬಡಾವಣೆಗಳು ಮತ್ತು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಗೊರೂರಿನ ಶೀಟಿನ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನಿರ್ಮಿಸಿ ಹಂಚಿಕೆ ಮಾಡಲಾಗಿದೆ.
ಈ ಬಡಾವಣೆ ಪೈಕಿ ಹಲವು ಬಡಾವಣೆಗಳಲ್ಲಿ ಈಗಾಗಲೆ ಪ್ರಮುಖ ಮೂಲ ಸೌಲಭ್ಯಗಳಾದ ನೀರು, ವಿದ್ಯುತ್, ರಸ್ತೆ ಇತರೆ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕೆಲವು ಬಡಾವಣೆಗಳಲ್ಲಿ ಕೇವಲ ನೀರಿನ ಸೌಲಭ್ಯ ಹಾಗೂ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಈ ಬಡಾವಣೆಗಳಲ್ಲಿ ಮನೆ ಹಾಗೂ ನಿವೇಶನ ಪಡೆದ ಅರ್ಹ ಫಲಾನುಭವಿಗಳು ಅವರವರ ಮನೆಗಳಿಗೆ ತೆರಳದೆ ಇರುವ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕೆಲವು ಬಡಾವಣೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದಾಗ ಸಾಕಷ್ಟು ಫಲಾನುಭವಿಗಳು ಮನೆಗಳಲ್ಲಿ ವಾಸ ಇಲ್ಲದಿರುವದು ತಿಳಿದುಬಂದಿದೆ.
ಈಗಾಗಲೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪಾಲಿಕೆ ವತಿಯಿಂದ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.