ರಸ್ತೆ ಅಭಿವೃದ್ಧಿಗೆ 100 ಕೋಟಿ ಬಿಡುಗಡೆ
ಟಿ. ನರಸೀಪುರ: ಸಂಚಾರ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಕಾಂಗ್ರೆಸ್ ಸರ್ಕಾರದಿಂದ ತಾಲೂಕಿನ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ನೂರು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ತಾಪಂ ಉಪಾಧ್ಯಕ್ಷ ಕೊಡಗಹಳ್ಳಿ ರಾಮಕೃಷ್ಣ ಹೇಳಿದರು.
ತಾಲೂಕಿನ ಹೆಗ್ಗೂರು ಗ್ರಾಮದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಕಾಮಗಾರಿಗಳ ಶಂಕುಸ್ಥಾಪನೆಗೆ ಬರಲಾಗುತ್ತಿಲ್ಲ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಾಗಿದ್ದರಿಂದ ಕಾಮಗಾರಿಗಳಿಗೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳಿಂದಲೇ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಯುವ ಮುಖಂಡ ಸುನಿಲ್ ಬೋಸ್ ಮಾತನಾಡಿ, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಅವರು ಕಾಂಗ್ರೆಸ್ ಸರ್ಕಾರದಿಂದ ನೂರಾರು ಕೋಟಿ ಅನುದಾನವನ್ನು ಮಂಜೂರು ಮಾಡಿಸುವ ಮೂಲಕ ಅಭಿವೃದ್ಧಿಯನ್ನು ಅಪೇಕ್ಷೆಯ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನರ ಆಸೆ ಈಡೇರಿಸಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಸೀಹಳ್ಳಿ ಮಂಡ್ಯ-ಬನ್ನೂರು ಮುಖ್ಯ ರಸ್ತೆಯ ಡಾಂಬರಿಕರಣಕ್ಕೆ 8 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ಬನ್ನೂರಿನಲ್ಲಿ ಎಂಎಂ ರಸ್ತೆಗೆ 11.50 ಕೋಟಿ, ಮೆಣಸಿಕ್ಯಾತನಹಳ್ಳಿ ಮಾರ್ಗದ ಕಟ್ಟೇಕೊಪ್ಪಲು-ಹೆಗ್ಗೂರು-ಕೆಂಪೇಗೌಡನಕೊಪ್ಪಲು ರಸ್ತೆಗೆ 60 ಕೋಟಿ, ಎನ್ಎನ್ 84 ಜಂಕ್ಷನ್ ಸಂಪರ್ಕಿಸುವ ಅಂಕನಹಳ್ಳಿ-ಜೇಡುಗುಡ್ಡೆ ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ 30 ಕೋಟಿ ಸಚಿವರು ಬಿಡುಗಡೆ ಮಾಡಿದ್ದಾರೆ. ವಿಶೇಷ ಘಟಕ ಯೋಜನೆಯಡಿ ಗ್ರಾಮದೊಳಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ನೀರಾವರಿ ನಿಗಮದ ಅನುದಾನ ಬಳಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ಹೇಳಿದರು. ಮಾಜಿ ಶಾಸಕ ಎಸ್.ಕೃಷ್ಣಪ್ಪ, ಬನ್ನೂರು ಪುರಸಭೆ ಅಧ್ಯಕ್ಷ ಅಜಿಜುಲ್ಲಾ, ಉಪಾಧ್ಯಕ್ಷ ರವೀಂದ್ರಕುಮಾರ್, ತಾಪಂ ಮಾಜಿ ಅಧ್ಯಕ್ಷೆ ಗಾಯಿತ್ರಿಸ್ವಾಮಿಗೌಡ, ನಟರಾಜು, ಎಂ.ಮಲ್ಲಿಕಾರ್ಜುನಸ್ವಾಮಿ, ಎಂ. ಸುಧೀರ್, ಎಪಿಎಂಸಿ ಅಧ್ಯಕ್ಷ ಎಂ.ರಾಜು, ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಹೊನ್ನನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್.ಮಂಜುನಾಥ್, ಬನ್ನೂರು ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಸತೀಶ್ನಾಯಕ, ಹಿಂದುಳಿದ ವರ್ಗಗಳ ಅಧ್ಯಕ್ಷ ಎ.ಎನ್. ಸ್ವಾಮಿ, ಎಸ್ಸಿ ವಿಭಾಗದ ಅಧ್ಯಕ್ಷ ಎ. ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

