ಮೈಸೂರು

ಭಿತ್ತಿಪತ್ರ ಹಂಚಿ ಚಾಲನೆ

Published On :

ಕೆ.ಆರ್. ನಗರ: ತಂಬಾಕಿನ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಸುಂಕದಿಂದ ನೇರವಾಗಿ ರೈತರ ಮೇಲೆ ಪರಿಣಾಮ ಬೀರುತ್ತಿದ್ದು, ತಂಬಾಕಿನ ಬಳಕೆ ಕಡಿಮೆಯಾಗಿ ಕೆಳಮಟ್ಟದ ತಂಬಾಕಿನ ಉತ್ಪನ್ನಗಳ ಮಾರಾಟ ಹೆಚ್ಚಲು ಕಾರಣವಾಗಲಿದೆ ಎಂದು ಚುಂಚನಕಟ್ಟೆ ಹೋಬಳಿಯ ತಂಬಾಕು ರೈತರು ವಿವಿಧ ಗ್ರಾಮಗಳಲ್ಲಿ ಭಿತ್ತಿಪತ್ರಗಳನ್ನು ಹಂಚಿದರು.
ರಾಜ್ಯ ವರ್ಜಿನಿಯಾ ತಂಬಾಕು ಬೆಳೆಗಾರರ ಒಕ್ಕೂಟ ವತಿಯಿಂದ ಜನ ಜಾಗೃತಿಗಾಗಿ ನಡೆಯುತ್ತಿರುವ ಕಾರ್ಯಕ್ರಮದ ಅಂಗವಾಗಿ ಗುರುವಾರ ಹೋಬಳಿಯ ಚಿಕ್ಕಹನಸೋಗೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಈ ಕ್ರಮದಿಂದ ರೈತರು ತಂಬಾಕು ಬೆಳೆಯಲು ತೊಂದರೆಯಾಗುತ್ತದೆ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದರು. ಕೆ.ಆರ್.ನಗರ ತಾಲೂಕು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ತಂಬಾಕು ಬೆಳೆಗಾರ ಸಿ.ಜೆ.ಪಾಲಾಕ್ಷ ಮಾತನಾಡಿ, ಕೇಂದ್ರ ಸರ್ಕಾರದ ನಿರ್ಧಾರದಿಂದ ರಾಜ್ಯದ 4 ಲಕ್ಷ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದು, ತಂಬಾಕು ಬೆಳೆಯಿಂದ ಸರ್ಕಾರಕ್ಕೆ ವಾರ್ಷಿಕ 28 ಸಾವಿರ ಕೋಟಿ ಆದಾಯವಿದ್ದು, 6 ಸಾವಿರ ಕೋಟಿ ವಿದೇಶಿ ವಿನಿಮಯವಿದ್ದರೂ ಕೇಂದ್ರ ಸರ್ಕಾರ ಇಂತಹ ತೀರ್ಮಾನಕ್ಕೆ ಮುಂದಾಗಿರುವುದು ದುರದೃಷ್ಟಕರ ಎಂದು ಹೇಳಿದರು.
ಚನ್ನಂಗೆರೆ ಗ್ರಾಪಂ ಮಾಜಿ ಸದಸ್ಯ ನಾರಾಯಣಗೌಡ, ರೈತ ಮುಖಂಡರಾದ ಶ್ರೀಧರ್, ಮಹದೇವ್, ಬಾಪೂಜಿ, ಕಾಳೇಗೌಡ, ಗೋವಿಂದೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.