ಗ್ರಾಮೀಣ ರಸ್ತೆ, ನಾಲೆ ಅಭಿವೃದ್ಧಿ
ಟಿ. ನರಸೀಪುರ: ಗ್ರಾಮೀಣ ಜನರ ಬದುಕಿನಲ್ಲಿ ಬದಲಾವಣೆ ತರಲು ರಸ್ತೆಗಳನ್ನು ಅಭಿವೃದ್ಧಿಪಡಿಸಿ, ನಾಲೆಗಳನ್ನು ಆಧುನಿಕರಣಗೊಳಿಸಲಾಗುತ್ತಿದೆ ಎಂದು ತಾಪಂ ಅಧ್ಯಕ್ಷೆ ಸುಧಾ ನಾಗಣ್ಣ ಹೇಳಿದರು.
ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಕೇಂದ್ರ ರಸ್ತೆ ನಿಧಿ (ಸಿಆರ್ಎಫ್)ಯ 12 ಕೋಟಿ ವೆಚ್ಚದಲ್ಲಿ ಬೆನಕನಹಳ್ಳಿ- ದೊಡ್ಡೇಬ್ಬಾಗಿಲು ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಣೆ ತರುವ ಉದ್ದೇಶದಿಂದ ಕ್ಷೇತ್ರದ ಶಾಸಕ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ನಾಲೆಗಳ ಆಧುನಿಕರಣ ಹಾಗೂ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನರಸೀಪುರದಲ್ಲಿ ಸಾವಿರಾರು ಕೋಟಿ ರು. ಮೌಲ್ಯದ ಅಭಿವೃದ್ಧಿ ಕಾಮಗಾರಿ ಸದ್ದಿಲ್ಲದೆ, ಪ್ರಗತಿಯಲ್ಲಿದೆ.
ನಾಲೆಗಳ ಆಧುನೀಕರಣ ಒಂದೆಡೆಯಾದರೆ, ಮತ್ತೊಂದೆಡೆ ರಸ್ತೆಗಳ ಅಭಿವೃದ್ಧಿ ಕಾಮಗಾರಿಯೂ ಒಂದಾಗಿದೆ. ಮುಂದಿನ ಮೂರೂವರೆ ವರ್ಷಗಳ ಅವಧಿಯೊಳಗೆ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿವೆ. ರಾಜ್ಯದ ಅಭಿವೃದ್ಧಿಯೊಂದಿಗೆ ನರಸೀಪುರ ಅಭಿವೃದ್ಧಿಯೂ ಆಗಲಿಗೆ ಎಂದು ತಿಳಿಸಿದರು.
ಕಾಂಗ್ರೆಸ್ ಯುವ ಮುಖಂಡ ಸುನಿಲ್ ಬೋಸ್ ಮಾತನಾಡಿದರು. ತಾಪಂ ಉಪಾಧ್ಯಕ್ಷ ರಾಮಕೃಷ್ಣ, ಮಾಜಿ ಶಾಸಕ ಎಸ್. ಕೃಷ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಉಪಾಧ್ಯಕ್ಷ ಗುರುಮೂರ್ತಿ, ಮಾಜಿ ಅಧ್ಯಕ್ಷ ಬಿ.ಎಂ.ಪರಶಿವಮೂರ್ತಿ, ಡೈರಿ ಮಾಜಿ ಅಧ್ಯಕ್ಷ ಬಿ.ಎಸ್. ಬಸಪ್ಪ, ಕೆ.ಎಂ. ಮಧುಕುಮಾರ್, ಡಿಸಿಸಿ ಸದಸ್ಯ ಗಣೇಶ, ರಾಜು, ಟಿಎಪಿಸಿಎಂಎಸ್ ನಿರ್ದೇಶಕ ಕೆಂಡನಕೊಪ್ಪಲು ಮಹೇಶ, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಎಇಇ ಎಂ.ಚಂದ್ರಶೇಖರ್, ಎಇ ಎಸ್.ಆರ್. ನವೀನ್, ಪಿಡಬ್ಲ್ಯುಡಿ ಅಧೀಕ್ಷಕ ಎಂಜಿನಿಯರ್ ಸತ್ಯನಾರಾಯಣ, ಇಇ ಆರ್.ಕೆ.ರಾಜು, ಎಇಇ ವಿನಯ್ಕುಮಾರ್, ಜಿಪಂ ಎಇಇ ಪಿ. ಲಕ್ಷ್ಮಣ್ರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

