ಮಹನೀಯರ ಜಯಂತಿಗಳು ಸಮಾಜಮುಖಿ ಚಿಂತನೆಗೆ ಪೂರಕವಾಗಿರಲಿ
ಹುಣಸೂರು: ಮಹನೀಯರ ಜಯಂತಿಗಳು ಸಮಾಜಮುಖಿ ಚಿಂತನೆ ನಡೆಸುವ ಸ್ಫೂರ್ತಿಯ ಚಿಲುಮೆಗಳಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅಭಿಪ್ರಾಯಪಟ್ಟರು. ಪಟ್ಟಣದ ಪುರಸಭಾ ಮೈದಾನದಲ್ಲಿ ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕ ಹಾಗೂ ಬಸವ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವ ಜಯಂತ್ಯುತ್ಸವದ ಕಾರ್ಯಕ್ರಮದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದಲ್ಲೇ ಬಸವಣ್ಣ ವಿಚಾರ ಆಧಾರಿತ ಚಿಂತನೆ, ವೈಜ್ಞಾನಿಕ ಮನೋಧರ್ಮ ಹಾಗೂ ವಾಸ್ತವಿಕತೆ ಕುರಿತು ಸಮಾಜಕ್ಕೆ ಅರಿವು ಮೂಡಿಸಲು ಜೀವನ ಮುಡಿಪಾಗಿಟ್ಟರು. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಒಂದೇ ರೀತಿಯ ಚಿಂತನೆಗಳನ್ನು ಹೊಂದಿದ ಮಹನೀಯರಾಗಿದ್ದರು. ಮಾನವೀಯ ನೆಲೆಗಟ್ಟಿನಲ್ಲಿ ನಿಂತು ಚಿಂತಿಸುವ ಗುಣ ಹೊಂದಿದವರಾಗಿದ್ದರು ಎಂದು ಅವರು ಹೇಳಿದರು. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಜಯಂತಿಗಳ ಆಚರಣೆಗಳು ವ್ಯಕ್ತಿಯ ವೈಭವೀಕರಣದ ವೇದಿಕೆಯಾಗಬಾರದು, ಬದಲಾಗಿ ವ್ಯಕ್ತಿಯ ಆದರ್ಶಗಳನ್ನು ಪಾಲಿಸಲು ಪಣತೊಡುವ ಮೆಟ್ಟಿಲಾಗಲಿ ಎಂದು ತಿಳಿಸಿದರು. ಶಾಸಕ ಎಚ್.ಪಿ. ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿಯನ್ನು ಮುಂದೆ ಮಾಡಿ ವ್ಯಕ್ತಿಯನ್ನು ಗುರುತಿಸುವ ಮನೋಭಾವನೆ ತೊಲಗದ ಹೊರತು ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

