ಮೈಸೂರು

ಸುಪ್ರೀಂ ತೀರ್ಪಿಗೆ ಎಐಎಂಎಸ್ಎಸ್ ದಿಗ್ಭ್ರಮೆ

Published On :

ಮೈಸೂರು: ವರದಕ್ಷಿಣೆ ಕಿರುಕುಳ ಘಟನೆಗಳಲ್ಲಿ ತಪ್ಪಿತಸ್ಥ ಆರೋಪಿಗಳನ್ನು ಪಿರ್ಯಾದಿ ದಾಖಲಾದ ತಕ್ಷಣ ಬಂಧಿಸಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ಜಿಲ್ಲಾ ಸಮಿತಿ ದಿಗ್ಭ್ರಮೆ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರವೇ 2012ರಲ್ಲಿ 498ಎ ಅಧಿನಿಯಮದನ್ವಯ 1,97,762 ವ್ಯಕ್ತಿಗಳು ಬಂಧಿತರಾಗಿದ್ದಾರೆ. ಇದರಲ್ಲಿ ಶೇ.93.6 ಮೊಕದ್ದಮೆಗಳಲ್ಲಿ ಆರೋಪ ಪಟ್ಟಿ ದಾಖಲಾದರೂ ಶೇ. 15 ಆರೋಪಿಗಳಿಗೆ ಮಾತ್ರ ಶಿಕ್ಷೆಯಾಗಿದೆ. ನಮ್ಮ ದೇಶದಲ್ಲಿ ಪುರುಷ ಪ್ರಧಾನ ವ್ಯವಸ್ಥೆ ಅಸ್ತಿತ್ವದಲ್ಲಿದ್ದು, ದಿನನಿತ್ಯ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ವಿಪರೀತ ಆಗಿರುವುದನ್ನು ಗಮನಿಸುತ್ತಿದ್ದೇವೆ. ಮಹಿಳೆಯರು ಬಹುತೇಕವಾಗಿ ಕೌಟುಂಬಿಕ ಹಿಂಸೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಜಿಲ್ಲಾ ಸಮಿತಿಯ ಪಿ.ಎಸ್. ಸಂಧ್ಯಾ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.