ಪ್ರತಿಯೊಬ್ಬರೂ ಕನ್ನಡ ಸೇವೆಗೆ ಮುಂದಾಗಿ
ಪಿರಿಯಪಟ್ಟಣ: ಕನ್ನಡ ನಾಡಿನ ಪರಂಪರೆ, ಇತಿಹಾಸ ಸಂರಕ್ಷಿಸಿ ಉಳಿಸಿ ಬೆಳೆಸುವುದರೊಂದಿಗೆ ಪ್ರತಿಯೊಬ್ಬ ಕನ್ನಡಿಗನೂ ಕನ್ನಡ ಸೇವೆಗೆ ಮುಂದಾಗಬೇಕು ಎಂದು ಬೆಟ್ಟದಪುರ ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ತುಳಸಿರಾಮ್ ಹೇಳಿದರು.
ತಾಲೂಕಿನ ಬೆಟ್ಟದಪುರ ಗ್ರಾಮದ ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋರಳ್ಳಿ ಘಟಕದ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಬ್ಯಾಂಕಿನಲ್ಲಿರುವ ಸಿಬ್ಬಂದಿ ಉತ್ತರ ಭಾರತದವರಾದರೂ ಉದ್ಯೋಗಕ್ಕೆ ಹಾಜಾರದ 6 ತಿಂಗಳಲ್ಲಿ ಕನ್ನಡ ಕಲಿತು ಗ್ರಾಹಕರೊಂದಿಗೆ ಕನ್ನಡದಲ್ಲೆ ವ್ಯವಹರಿಸುತ್ತಿದ್ದಾರೆ ಎಂದು ತಿಳಿಸಿದರು.
ಎಸ್ಎಂಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹಾಗೂ ಶಿಕ್ಷಣತಜ್ಞ ಬಿ.ವಿ.ಮಂಜುನಾಥ್ ಮಾತನಾಡಿ, ವಿಶ್ವದ ಪ್ರಸಿದ್ಧ ಭಾಷೆಗಳಲ್ಲಿ ಕನ್ನಡವೂ ಒಂದಾಗಿದ್ದು ಅದನ್ನು ಉಳಿಸಿ ಬೆಳೆಸುವ ಕೆಲಸವನ್ನು ವಿದ್ಯಾರ್ಥಿಗಳು ಶಾಲಾ- ಕಾಲೇಜು ಹಂತದಿಂದಲೇ ಪ್ರಾರಂಭಿಸಬೇಕು. ಶತಮಾನದ ಸಂಭ್ರಮದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಶಾಲೆಯೆಡೆಗೆ ಪರಿಷತ್ತಿನ ನಡಿಗೆ ಎಂಬ ಧ್ಯೇಯವಾಕ್ಯದಡಿಯಲ್ಲಿ ಶಾಲೆಗೊಂದು ಕಾರ್ಯಕ್ರಮ ಹಮ್ಮಿಕೊಂಡು ಪ್ರತಿಭೆಗಳನ್ನು ಗುರುತಿಸುತ್ತಿರುವ ಕೆಲಸ ಪ್ರಶಂಸನೀಯ ಎಂದರು.
ಕಸಾಪ ತಾಲೂಕು ಅಧ್ಯಕ್ಷ ಗೊರಹಳ್ಳಿ ಜಗದೀಶ್, ಕಸಾಪ ಪದಾಧಿಕಾರಿಗಳಾದ ಆರ್. ವಿನಯ್ಕುಮಾರ್, ಅಶ್ವಥ್ಕುಮಾರ್, ಆರ್.ವೆಂಕಟೇಶ್, ಕಗ್ಗುಂಡಿ ರಾಜು, ಜಗದೀಶ್, ಸಪಪೂ ಕಾಲೇಜಿನ ಅಧ್ಯಾಪಕ ಕೆಂಪರಾಜು, ಎಸ್ಎಂಎಸ್ ಸಂಸ್ಥೆಯ ಕಾರ್ಯದರ್ಶಿ ಎ.ವಿ. ಛಾಯಾ ಇದ್ದರು.
ಮನೆಯಲ್ಲಿ ಕಳವು
ಕಿತ್ತೂರು: ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದ ಬೀರು ಹೊತ್ತೊಯ್ದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಗೊರಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗೊರಹಳ್ಳಿ ಗ್ರಾಮದ ಶಿವಕುಮಾರ ಎಂಬವರ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ ಬೀರುವನ್ನು ಹೊತ್ತೊಯ್ದಿದ್ದಾರೆ. ಬಳಿಕ ಬೀರುವಿನಲ್ಲಿದ್ದ 2 ಲಕ್ಷ ಮತ್ತು 40 ಗ್ರಾಂ. ಚಿನ್ನ ಕಳವು ಮಾಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

