ರೈತರಿಂದ ಹೆದ್ದಾರಿ ಬಂದ್
ಹುಣಸೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪಟ್ಟಣದ ಮುನೇಶ್ವರ ಕಾವಲ್ ಮೈದಾನದಲ್ಲಿ ಸಮಾವೇಶಗೊಂಡ ರೈತರು, ಪ್ರಮುಖ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಮೊಳಗಿಸಿ, ಉಪ ವಿಭಾಗಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಮೈಸೂರು-ಬಂಟ್ವಾಳ ಹೆದ್ದಾರಿ ಬಂದ್ ಮಾಡಿದರು. ಈ ವೇಳೆ ಕೆಲ ಹೊತ್ತು ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿದ ರೈತರು, ಮುಖ್ಯದ್ವಾರ ಬಂದ್ ಮಾಡಿ ಪ್ರತಿಭಟಿಸಿದರು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ರೈತರ ಮನವಿಗೆ ಬಗ್ಗದಿದ್ದರೆ ಮುಂದಿನ ದಿನದಲ್ಲಿ ದನ-ಕರು, ಸಂಸಾರದೊಂದಿಗೆ ತಾಲೂಕು ಕಚೇರಿ ಎದುರು ಬಿಡಾರ ಹೂಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ಬಡವರ ಉದ್ಧಾರ ಮಾಡುತ್ತೇವೆಂದು ಪ್ರಮಾಣ ವಚನ ಸ್ವೀಕರಿಸಿದ ವಿವಿಧ ಪಕ್ಷಗಳು ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿವೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅರ್ಜಿ ಹಾಕದಿದ್ದರೂ ಬಡವರಿಗೆ 1ಕ್ಕೆ ಅಕ್ಕಿ ನೀಡುತ್ತಿದೆ. ಇದಕ್ಕೆ ಬದಲಾಗಿ ಅಕ್ರಮ-ಸಕ್ರಮ ಎಂಬ ತಾರತಮ್ಯವಿಲ್ಲದೆ ಅಗತ್ಯವಿರುವಷ್ಟು ಟ್ರಾನ್ಸ್ಫಾರ್ಮರ್ ಅಳವಡಿಸಬೇಕು ಎಂದು ಆಗ್ರಹಿಸಿದರು.
ಕನಿಷ್ಠ 12 ಗಂಟೆ ಕಾಲ ನಿರಂತರ ಜ್ಯೋತಿಯನ್ನು 6 ಗಂಟೆ ಕಾಲ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಬೇಕು. ಅಣೆಕಟ್ಟುಗಳ ಮುಖಾಂತರ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ನದಿಗೆ ಹರಿಬಿಡುತ್ತಿದ್ದಾರೆ. ಕೇಳಲು ಹೋದವರನ್ನು ಜೈಲಿಗಟ್ಟುತ್ತಾರೆ ಟೀಕಿಸಿದರು. ತಾಲೂಕು ಗೌರವಾಧ್ಯಕ್ಷ ನಾಗಣ್ಣಾಚಾರ್, ಚಂದ್ರೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

