ನೀರಿನ ಸಮಸ್ಯೆ ಬರದಂತೆ ಕ್ರಮ ಕೈಗೊಳ್ಳಿ- ರಾಮಯ್ಯ ಸೂಚನೆ
ಮೈಸೂರು: ವರುಣ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ನಂಜನಗೂಡು ಪ್ರವಾಸಿ ಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ ತಲೆದೋರದಂತೆ ಕೆಟ್ಟು ಹೋಗಿರುವ ಟಿಸಿಗಳನ್ನು ಕೂಡಲೇ ಬದಲಾಯಿಸಬೇಕು. ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡಲು ಕ್ರಮಕೈಗೊಳ್ಳಬೇಕು. ಕ್ಷೇತ್ರದ ಅಂಗನವಾಡಿ ಕೇಂದ್ರಗಳಿಗೆ ತಾಲೂಕು ಅಧಿಕಾರಿಗಳು ಭೇಟಿ ನೀಡಿ ಅಗಾಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ದತ್ತು ತೆಗೆದುಕೊಂಡು ಆಗಾಗ್ಗೆ ಪರಿಶೀಲಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು. ವೃದ್ಧಾಪ್ಯ ವೇತನ, ವಿಧವಾ ವೇತನದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ಕಟ್ಟಾಜ್ಞ ಹೊರಡಿಸಿದರು.
ತಾಪಂ ಇಒ ಕೃಷ್ಣಂರಾಜು, ಮಲ್ಲೇಶ್, ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.
ಪ್ರಾಣಿಗಳ ದತ್ತು ಸ್ವೀಕಾರ
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ವಿಜಯನಗರ ನಿವಾಸಿ ಟಿ.ಡಿ. ಯೋಗಾಂಬ ಎಂಬವರು ಆನೆ ಮರಿ, ಕಾಡು ಬೆಕ್ಕು, ಚಿರತೆ ಬೆಕ್ಕು, ಗೂಬೆ, ನವಿಲು, ಜಿಂಕೆ, ನಾಗರಹಾವು, ಆಮೆ ಮತ್ತು ಲವ್ಬರ್ಡ್ಗಳನ್ನು ದತ್ತು ಸ್ವೀಕರಿಸಿದ್ದಾರೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

