ಮೈಸೂರು

ಖಾಸಗಿ ವಾಹನಗಳ ಮಾಲೀಕರು, ಚಾಲಕರ ಧರಣಿ

Published On :

ಮೈಸೂರು: ಜಿಲ್ಲೆಯ ಬಡವರ್ಗದ ವಿದ್ಯಾವಂತರು, ನಿರುದ್ಯೋಗಿಗಳು, ಮ್ಯಾಕ್ಸಿಕ್ಯಾಬ್, ವಿಂಗರ್, 407, ತೂಫಾನ್ ವಾಹನಗಳ ಮಾಲೀಕರು ಹಾಗೂ ಚಾಲಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ವೇದಿಕೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಡವರು, ವಿದ್ಯಾವಂತರು, ನಿರುದ್ಯೋಗಿಗಳು ಮ್ಯಾಕ್ಸಿಕ್ಯಾಬ್, ವಿಂಗರ್, 407, ತೂಫಾನ್ ಮುಂತಾದ ಲಘು ಸಾರಿಗೆ ವಾಹನಗಳನ್ನು ಬ್ಯಾಂಕ್ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಿ ತಮ್ಮ ಕುಟುಂಬದ ನಿರ್ವಹಣೆ ಮಾಡುತ್ತಿದ್ದಾರೆ. ಸಾರಿಗೆ ಬಸ್ಗಳು ತೆರಳದ ಗ್ರಾಮಗಳಿಗೆ ಸಾರಿಗೆ ಸಂಪರ್ಕ ಒದಗಿಸುತ್ತಿವೆ. ಆದರೆ ಪೊಲೀಸರು ಇದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆಯವರು ಖಾಸಗಿ ಮ್ಯಾಕ್ಸಿಕ್ಯಾಬ್ ಮುಂತಾದ ವಾಹನಗಳು ನಗರ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ನಗರ ಪ್ರವೇಶಿಸುವ ವಾಹನಗಳಿಗೆ 3 ಸಾವಿರದಿಂದ 5 ಸಾವಿರವರೆಗೆ ದಂಡ ವಿಧಿಸುತ್ತಿದ್ದಾರೆ. ಬಡ ಚಾಲಕರು ಮತ್ತು ವಾಹನಗಳ ಮಾಲೀಕರು ಶೋಷಣೆಗೆ ಒಳಗಾಗುತ್ತಿದ್ದಾರೆ. ಸ್ವಂತ ಉದ್ಯೋಗದ ಮೂಲಕ ಜೀವನ ನಡೆಸುತ್ತಿರುವ ಬಡ ಜನರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ದೂರಿದರು.
ಆದ್ದರಿಂದ ಕೂಡಲೆ ರಾಜ್ಯ ಸರ್ಕಾರ ಸಾರಿಗೆ ಇಲಾಖೆ ಕಾನೂನಿಗೆ ಸೂಕ್ತ ತಿದ್ದುಪಡಿ ತಂದು ಕಾನೂನು ತೊಡಕನ್ನು ನಿವಾರಿಸೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನೆ ಆರಂಭಿಸಿ, ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದರು. ನಾಗನಹಳ್ಳಿ ಎಂ.ರೇವಣ್ಣ, ಎಚ್.ಎಸ್. ಶಿವಸ್ವಾಮಿ, ಜಿ.ರವಿ ದೇವಲಾಪುರ,ನಟರಾಜು, ಅಂದಾನಪ್ಪ, ಕೆ. ಶಂಕರ್, ಚೆಲುವರಾಜು, ಶಿವಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.