ಮೈಸೂರು

ನಾಳೆಯಿಂದ ಮೂರು ದಿನಗಳ ಜ್ಞಾನಸತ್ರ ಕಾರ್ಯಕ್ರಮ

Published On :

ಮೈಸೂರು: ಕೃಷ್ಣಮೂರ್ತಿಪುರಂನ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ಜಯತೀರ್ಥರ ಆರಾಧನೆ ಹಾಗೂ ಶ್ರೀ ವಿದ್ಯಾಮಾನ್ಯ ತೀರ್ಥರ ಶ್ರೀಪಾದಂಗಳವರ ಜನ್ಮಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಜು. 13 ರಿಂದ 15 ರವರೆಗೆ ಮೂರು ದಿನಗಳ ಜ್ಞಾನ ಸತ್ರವನ್ನು ಶ್ರೀಮನ್ ಮಧ್ವಾಚಾರ್ಯ ತತ್ವಜ್ಞಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀನಾಥ್ ಹೇಳಿದ್ದಾರೆ.
ಉಡುಪಿ ಅದಮಾರು ಮಠಾಧೀಶರಾದ 108 ವಿಶ್ವಪ್ರಿಯ ತೀರ್ಥ ಪಾದಂಗಳವರು ಮೂರು ದಿನಗಳ ಕಾಲ ನಗರದಲ್ಲಿ ವಾಸ್ತವ್ಯ ಮಾಡುವರು. ಪ್ರತಿದಿನ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮದ್ಭಾಗವತ ದಶಮ ಸ್ಕಂದ ಪ್ರವಚನವನ್ನು ನೆರವೇರಿಸುವರು. ಎಲ್ಲ ಆಧ್ಯಾತ್ಮ ಬಂಧುಗಳು ಈ ಜ್ಞಾನ ಸತ್ರದಲ್ಲಿ ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶ್ರೀನಾಥ್, ದೂ. 2331939 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.