ಅಂಬೇಡ್ಕರ್ ಭವನ ಸರ್ವಕ್ಕೂ ಬಳಕೆಯಾಗಲಿ
ಎಚ್.ಡಿ. ಕೋಟೆ: ಅಂಬೇಡ್ಕರ್ ಭವನವನ್ನು ವಿವಾಹ ಕಾರ್ಯಕ್ರಮಗಳಿಗೆ ಮಾತ್ರ ಸಿಮೀತಗೊಳಿಸದೆ, ಶಿಕ್ಷಣ, ಉದ್ಯೋಗ ತರಬೇತಿ ಇತ್ಯಾದಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸುವಂತಾಗಬೇಕು ಎಂದು ಸಂಸದ ಆರ್. ಧ್ರುವನಾರಾಯಣ್ ಅಭಿಪ್ರಾಯಪಟ್ಟರು.
ಪಟ್ಟಣದ ಸಿದ್ದಪ್ಪಾಜಿ ರಸ್ತೆಯಲ್ಲಿ 1.10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಅವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಅನೇಕ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ತರಬೇತಿ ನೀಡುವುದು ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಅದಕ್ಕೆ ಭವನ ಬಳಸಿಕೊಳ್ಳಬಹುದು. ಭವನಗಳು ಕೇವಲ ಭವನಗಳಾಗಿ ಉಳಿದುಕೊಳ್ಳಬಾರದು. ಭವನಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದರು.
ಅಂಬೇಡ್ಕರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ, ಶಿಕ್ಷಣ ಸಂಸ್ಥೆಯೊಂದನ್ನು ಪ್ರಾರಂಭಿಸಿದ್ದರು. ಅಸ್ಪೃಶ್ಯತೆಯಿಂದ ಬಳಲುತ್ತಿದ್ದ ಮತ್ತು ಶಿಕ್ಷಣ ವಂಚಿತ ಶೋಷಿತರಿಗೆ ಅಲ್ಲಿ ವಿದ್ಯಾಭ್ಯಾಸ ನೀಡಲಾಗುತ್ತಿತ್ತು. ಶಿಕ್ಷಣ ಪ್ರತಿಯೊಬ್ಬರಿಗೂ ಅತೀ ಮುಖ್ಯ. ತಾಲೂಕಿನಲ್ಲಿ ತಮಗೆ ಬಂದ ಮಾಹಿತಿಯಂತೆ ಇನ್ನೂ ಶಾಲೆ ಬಿಟ್ಟ ಮಕ್ಕಳು ಇದ್ದಾರೆ. ಸರ್ಕಾರದ ನಿಯಮದಂತೆ ಕಡ್ಡಾಯ ಶಿಕ್ಷಣ ಜಾರಿಗೊಳಿಸಿರುವುದರಿಂದ ಮಕ್ಕಳನ್ನು ಪೋಷಕರು ಶಾಲೆಗೆ ಕಡ್ಡಾಯವಾಗಿ ಕಳುಹಿಸಬೇಕು ಎಂದು ಮನವಿ ಮಾಡಿದರು. ಶಾಸಕ ಚಿಕ್ಕಮಾದು ಮಾತನಾಡಿ, ಇಂದಿನ ದಿನಗಳಲ್ಲಿ ಅಂಬೇಡ್ಕರ್ ಭವನಗಳು ಜನರಿಗೆ ಬೇಕಾಗಿವೆ. ಆ ನಿಟ್ಟಿನಲ್ಲಿ ಸರ್ಕಾರ ಭವನ ನಿರ್ಮಾಣಕ್ಕೆ ಅನುದಾನ ಕೊಟ್ಟಿದೆ. ಉತ್ತಮ ಮತ್ತು ಗುಣಮಟ್ಟದ ಭವನ ನಿರ್ಮಾಣವಾಗಲಿ ಎಂದು ಆಶಿಸಿದರು.
ಪಪಂ ಅಧ್ಯಕ್ಷ ಎನ್.ಉಮಾಶಂಕರ್, ಉಪಾಧ್ಯಕ್ಷೆ ಸುಹಾಸಿನಿ, ಸದಸ್ಯರಾದ ತಾಜ್, ಅನ್ಸರ್, ಸುಮಾ, ಮಹೇಶ್ವರಿ, ಎಚ್.ಸಿ. ನರಸಿಂಹಮೂರ್ತಿ, ಮುಖಂಡರಾದ ಎಂ.ಸಿ. ದೊಡ್ಡನಾಯಕ, ಸುಂದರದಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

