ಮೈಸೂರು

ಶಾಸಕ ಗೋಮ ವಾದಕ್ಕೆಆದಿವಾಸಿಗಳ ತಿರುಗೇಟು

Published On :

ಮೈಸೂರು: ಆದಿವಾಸಿಗಳು ಕಾಡಿನಲ್ಲಿರಬೇಕು. ಆದರೆ, ಇಂಗ್ಲಿಷ್ ಕಲಿಯಬಾರದು, ಪ್ಯಾಂಟ್ ಧರಿಸಬಾರದು ಎಂಬ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಹೇಳಿಕೆಗೆ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ತಿರುಗೇಟು ನೀಡಿದೆ. ಇಂದಿನ ಸಮಾಜದಲ್ಲಿ ಆದಿವಾಸಿಗಳಾದ ನಾವು ಸಹ ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಮುಖ್ಯವಾಹಿನಿಗೆ ತರಬೇಕಾಗುತ್ತದೆ. ಆದರೆ, ವಿದ್ಯಾವಂತರೂ, ಸಶಕ್ತರೂ ಆದ ಗೋ.ಮಧುಸೂದನ್ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಬಿಟ್ಟು, ಆದಿವಾಸಿಗಳ ಬಗ್ಗೆ ಒಳ್ಳೆ ರೀತಿಯಲ್ಲಿ ಯೋಚಿಸಿ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಕೆ.ಕುಮಾರ್, ಜಿಲ್ಲಾಧ್ಯಕ್ಷ ವಿಜಯಕುಮಾರ್ ಆಗ್ರಹಿಸಿದ್ದಾರೆ. ಪಾರಂಪರಿಕ ಅರಣ್ಯ ಹಕ್ಕು ಕಾಯಿದೆ ಬಗ್ಗೆ ಹೋರಾಟ ಮಾಡಿ ಕಾಡಿನಲ್ಲಿರುವ ಅರಣ್ಯ ಆದಿವಾಸಿಗಳಿಗೆ ಮೂಲಭೂತ ಸಮಸ್ಯೆಗಳಾದ ನೀರು, ಮನೆ, ರಸ್ತೆ, ಶಿಕ್ಷಣ, ಆರೋಗ್ಯ ಇವುಗಳನ್ನು ತುರ್ತಾಗಿ ಜಾರಿ ಮಾಡುವ ಚಿಂತನೆ ಮಾಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.