ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು
ಟಿ. ನರಸೀಪುರ: ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೊಸಪುರ ಗ್ರಾಮದ ಬಳಿ ಕಳೆದ ಶುಕ್ರವಾರ ರಾತ್ರಿ ಜರುಗಿದೆ. ತಾಲೂಕಿನ ತಲಕಾಡು ಗ್ರಾಮದ ಚನ್ನಪಟ್ಟಣ ಎಎಸ್ಐ ಸಿ.ಎಸ್. ಮಂಜುನಾಥ್ ಎಂಬವರ ಪುತ್ರ ಟಿ.ಎಂ. ಮಹೇಶ್ (24) ಮೃತಪಟ್ಟ ದುರ್ದೈವಿ. ಶಿಕ್ಷಕ ಸುಬ್ಬಣ್ಣ ಎಂಬವರ ಪುತ್ರ ಸಂಜಯ್ಕುಮಾರ್ (22) ಅಪಘಾತದಲ್ಲಿ ಗಾಯಗೊಂಡಿದ್ದು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನರಸೀಪುರದಿಂದ ಮೋಟಾರ್ ಸೈಕಲ್ನಲ್ಲಿ ತಲಕಾಡಿಗೆ ತೆರಳುತ್ತಿದ್ದಾಗ ಹೊಸಪುರ ನಿಲಸೋಗೆ ಗ್ರಾಮದ ಮಧ್ಯೆ ನಡು ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆಯಿತು. ಬೈಕ್ ಸವಾರ ಟಿ.ಎಂ.ಮಹೇಶ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಸಂಜಯ್ಕುಮಾರ್ನನ್ನು ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಯಿತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

