ಮೈಸೂರು

ಅಭಿವೃದ್ಧಿಗೆ ಸಾರ್ವಜನಿಕರು ಸಹಕರಿಸಲಿ: ವೆಂಕಟೇಶ್

Published On :

ಪಿರಿಯಾಪಟ್ಟಣ: ಪಟ್ಟಣದ ಅಭಿವೃದ್ಧಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಕೆ.ವೆಂಕಟೇಶ್ ಹೇಳಿದರು. ಪಟ್ಟಣದ ಕನ್ನಂಬಾಡಿ ಅಮ್ಮನವರ ದೇವಸ್ಥಾನದ ಬಳಿ ಪಪಂ ವತಿಯಿಂದ 13ನೇ ಹಣಕಾಸು ಯೋಜನೆಯಡಿ ನಿರ್ಮಿಸಿರುವ 4.3 ಲಕ್ಷ ವೆಚ್ಚದ ಹೈಮಾಸ್ಟ್ ವಿದ್ಯುತ್ ದೀಪ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಮೂಲ ಸೌಕರ್ಯಗಳಾದ ವಿದ್ಯುತ್, ಒಳಚರಂಡಿ, ವಸತಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಪಕ್ಕದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ನೀರು ನಿಂತು ಕೊಳಚೆ ಪ್ರದೇಶವಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರೋತ್ಥಾನ ಯೋಜನೆಯಿಂದ ಮಂಜೂರಾಗಿರುವ 1.10 ಕೋಟಿ ವೆಚ್ಚದಲ್ಲಿ ಚರಂಡಿ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಿ, ಚರಂಡಿ ಸೇತುವೆಯ ಮೇಲ್ಭಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸುವಂತೆ ಪಪಂ ಅಧಿಕಾರಿಗಳಿಗೆ ಸೂಚಿಸಿದರು. ಪಪಂ ಅಧ್ಯಕ್ಷೆ ರತ್ನಾ ಶಿವಣ್ಣ, ಉಪಾಧ್ಯಕ್ಷ ಅಬ್ದುಲ್ ಅಜೀಜ್, ಸದಸ್ಯರಾದ ಸುವರ್ಣ, ತ್ರಿನೇಶ್, ಮಂಜು, ವೇಣುಗೋಪಾಲ್, ಎಪಿಎಂಸಿ ಅಧ್ಯಕ್ಷ ಕೆ.ಹೊಲದಪ್ಪ, ಪಪಂ ಮುಖ್ಯಾಧಿಕಾರಿ ಪಂಕಜಾರೆಡ್ಡಿ, ಎಂಜಿನಿಯರ್ ಸತ್ಯಕುಮಾರ್, ಸಿಬ್ಬಂದಿ ಜಯರಾಂ, ಮಧುಸೂದನ್, ಮುಖಂಡರಾದ ಮಾನ್ಸೂನ್‌ಚಂದ್ರು, ಡಾ.ಬಿ.ಜೆ. ವಿಜಯಕುಮಾರ್, ಪುಟ್ಟರಾಜು, ಪಿ. ಮಹದೇವ್, ವೈ. ವೆಂಕಟಯ್ಯ, ನಾರಾಯಣ್ ಇದ್ದರು.
ಗ್ರಾಮ ಸಭೆ
ಅಂತರಸಂತೆ: ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಗ್ರಾಪಂ ವ್ಯಾಪ್ತಿಯ ಸೋಗಹಳ್ಳಿ, ಹೊಸಮಾಳ, ಹುಣಸೇಕುಪ್ಪೆ, ನಿಸನ ಮತ್ತು ಹೊಸಹೊಳಲು ಗ್ರಾಮಗಳಲ್ಲಿ ಜು.16 ರಿಂದ 18 ರವರೆಗೆ 2014-15ನೇ ಸಾಲಿನ ವಾರ್ಡ್, ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷ ಎ.ಎನ್. ಲೀಲಾಶಂಕರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜು.19ರ ಬೆಳಗ್ಗೆ 11ಕ್ಕೆ ಅಂತರಸಂತೆ ಗ್ರಾಪಂ ಆವರಣದಲ್ಲಿ ವಿಶೇಷ ಗ್ರಾಮ ಸಭೆ ಕರೆಯಲಾಗಿದೆ. ಸಭೆಯಲ್ಲಿ ಶಾಸಕ ಎಸ್.ಚಿಕ್ಕಮಾದು ಹಾಗೂ ತಾಲೂಕಿನ ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು. ವಿಶೇಷ ಗ್ರಾಮಸಭೆಗೆ ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ವಾರ್ಡ್ ಮತ್ತು ಗ್ರಾಮ ಸಭೆಗೆ ಹಾಜರಾಗಬೇಕೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.