ಬೀಜೋಪಚಾರ ಆಂದೋಲನ
ಕೆ.ಆರ್. ನಗರ: ಆಧುನಿಕ ಕೃಷಿ ಪದ್ಧತಿಯೊಂದಿಗೆ ಸಾವಯವ ಕೃಷಿ ಅಳವಡಿಸಿಕೊಂಡರೆ ಉತ್ತಮ ಲಾಭ ಮತ್ತು ಇಳುವರಿ ಪಡೆಯಲು ಸಾಧ್ಯ ಎಂದು ಸಹಾಯಕ ಕೃಷಿ ನಿರ್ದೇಶಕ ಸಿ.ಎನ್. ಚಂದ್ರಶೇಖರ್ ಹೇಳಿದರು.
ತಾಲೂಕಿನ ಶ್ರೀರಾಂಪುರ ಗ್ರಾಮದ ಪ್ರಿಯದರ್ಶಿನಿ ಕಲ್ಯಾಣ ಮಂಟಪದಲ್ಲಿ ನಡೆದ ಬೀಜೋಪಚಾರ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಹಂಗಾಮಿನಲ್ಲಿ ಸಾಲಿಗ್ರಾಮ ಮತ್ತು ಮಿರ್ಲೆ ವ್ಯಾಪ್ತಿಯಲ್ಲಿ ಬತ್ತದ ಬೆಳೆಗೆ ಬೆಂಕಿ ರೋಗ ತಗುಲಿತ್ತು. ಆದ್ದರಿಂದ ರೈತರು ಮುನ್ನೆಚ್ಚರಿಕಾ ಕ್ರಮವಾಗಿ ರೋಗ ಹೋಗಲಾಡಿಸಲು ಬೀಜೋಪಚಾರದ ಮೂಲಕ ಆರೋಗ್ಯಕರ ಮತ್ತು ರೋಗಮುಕ್ತ ಬೀಜಗಳನ್ನು ಬಿತ್ತನೆ ಮಾಡಿ ಉತ್ತಮ ಬೆಳೆ ಬೆಳೆಯಬೇಕೆಂದು ತಿಳಿಸಿದರು.
ರಾಜ್ಯ ಸರ್ಕಾರ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವ ರೈತರಿಗೆ ಶೇ.90ರಷ್ಟು ರಿಯಾಯಿತಿ ನೀಡುತ್ತಿದ್ದು, ತುಂತುರು ನೀರಾವರಿ ಘಟಕಗಳನ್ನು ಕೃಷಿ ಕೇಂದ್ರದ ಮೂಲಕ ವಿತರಣೆ ಮಾಡುತ್ತಿದ್ದು, ಆಸಕ್ತರು ಇದರ ಲಾಭ ಪಡೆದುಕೊಳ್ಳಿ ಎಂದರು. ಅಲ್ಲದೆ, ಸಾವಯವ ಗೊಬ್ಬರ, ಎರೆಹುಳು ಗೊಬ್ಬರ ಬಳಕೆ ಮತ್ತು ಕೃಷಿ ಇಲಾಖೆಯಿಂದ ನೀಡುವ ಲಘು ಪೋಷಕಾಂಶಗಳನ್ನು ಬಳಸುವ ಮೂಲಕ ಭೂಮಿಯಲ್ಲಿ ಸತ್ವಾಂಶಗಳನ್ನು ಹೆಚ್ಚಿಸಿ ಉತ್ತಮ ಇಳುವರಿ ಪಡೆಯಿರಿ ಎಂದು ಮಾಹಿತಿ ನೀಡಿದರು.
ನಿವೃತ್ತ ಶಿಕ್ಷಕರ ಸಂಘಕ್ಕೆ ಆಯ್ಕೆ
ಕೆ.ಆರ್. ನಗರ: ಸರ್ಕಾರಿ ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರಾಗಿ ಎಂ.ಎಸ್. ಬಸವರಾಜು ಆಯ್ಕೆಯಾಗಿದ್ದಾರೆ. ಪಟ್ಟಣದ ಶಿಕ್ಷಕರ ಭವನದಲ್ಲಿ ನಡೆದ 2ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜವರೇಗೌಡ, ಬಿ.ಎಂ.ಬಸವರಾಜು, (ಗೌರವಾಧ್ಯಕ್ಷರು), ಎಂ.ಆರ್. ಚಂದ್ರಶೇಖರ್ (ಪ್ರಧಾನ ಕಾರ್ಯದರ್ಶಿ), ಡಿ.ಎಸ್. ಚಂದ್ರಪ್ಪ (ಸಹ ಕಾರ್ಯದರ್ಶಿ), ಚೌಡನಾಯ್ಕ (ಖಜಾಂಚಿ), ಗೋವಿಂದಯ್ಯ (ಸಾಂಸ್ಕೃತಿಕ ಕಾರ್ಯದರ್ಶಿ), ತಮ್ಮನಾಯ್ಕ (ಸಂಘಟನಾ ಕಾರ್ಯದರ್ಶಿ) ಮತ್ತು ಇತರೆ 15 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಯಾಗಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

