ಕಣ್ಣುಗಳ ರಕ್ಷಣೆಗೆ ಕಾಳಜಿ ವಹಿಸಿ
ಟಿ. ನರಸೀಪುರ: ಆರೋಗ್ಯದಲ್ಲಿ ಅಮೂಲ್ಯವಾದ ಕಣ್ಣುಗಳ ರಕ್ಷಣೆಗೆ ಕಾಳಜಿ ವಹಿಸಬೇಕು ಎಂದು ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಯೂರ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಭಾರತಿ ಟ್ರಸ್ಟ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಹಾಗೂ ಅರವಿಂದ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಣ್ಣಿನ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದ ಅವರು, ಸೂಕ್ಷ್ಮತೆಯಿರುವ ಕಣ್ಣುಗಳನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಮೂರ್ತಿ ಮಾತನಾಡಿದರು. ಶಿಬಿರದಲ್ಲಿ 122ಕ್ಕೂ ಹೆಚ್ಚು ರೋಗಿಗಳು ಕಣ್ಣು ತಪಾಸಣೆ ಮಾಡಿಸಿಕೊಂಡರು. ಅದರಲ್ಲಿ 58 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಗೆ ಕರೆದೊಯ್ಯಲಾಯಿತು. ಬೆನಕನಹಳ್ಳಿ ಡೇರಿ ಅಧ್ಯಕ್ಷ ಬಿ.ಸೋಮಶಂಕರ್, ಟ್ರಸ್ಟ್ ಖಜಾಂಚಿ ಎಸ್. ಸ್ವಾಮಿ, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ವೈದ್ಯರಾದ ಡಾ.ವಿಜಯ್, ಡಾ.ಪ್ರದೀಪ್, ನಾಗರಿಕ ಸೇವಾ ವೇದಿಕೆ ಗೌರವಾಧ್ಯಕ್ಷ ಪಿ.ಪುಟ್ಟರಾಜು ಭಾಗವಹಿಸಿದ್ದರು.
ಉದ್ಯಮಶೀಲತಾ ಅಭಿವೃದ್ಧಿ ತರಬೇತಿ
ಎಚ್.ಡಿ. ಕೋಟೆ: ಕರ್ನಾಟಕ ಉದ್ಯಮ ಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಎಚ್.ಡಿ.ಕೋಟೆಯಲ್ಲಿ 11 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ತರಬೇತಿ ಉಚಿತವಾಗಿದ್ದು, ತರಬೇತಿಯಲ್ಲಿ ಪ್ರೇರಣಾ ಉದ್ಯಮ ಸ್ಥಾಪನೆ, ಬ್ಯಾಂಕಿನಿಂದ ದೊರೆಯುವ ಸಾಲ ಸೌಲಭ್ಯ, ಉದ್ಯಮ, ಮಾರುಕಟ್ಟೆ ನಿರ್ವಹಣೆ, ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. 5ನೇ ತರಗತಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 18 ರಿಂದ 45 ವರ್ಷ ವಯೋವುತಿಯೊಳಗಿನ ಅಭ್ಯರ್ಥಿಗಳುಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜು.18ರ ಬೆಳಗ್ಗೆ 11ಕ್ಕೆ ಕೈಗಾರಿಕಾ ವಿಸ್ತರಣಾಧಿಕಾರಿ ಕಚೇರಿ, ಎಚ್.ಡಿ. ಕೋಟೆ ಇಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಮೊ.9945645634, 9449391913.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

