ಮೈಸೂರು

ಅಹಿಂದ ಮರೆತ ಸಿದ್ದರಾಮಯ್ಯ: ಸಂಪಂಗಿ ಟೀಕೆ

Published On :

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತರ ಅಭಿವೃದ್ಧಿ ಮರೆತಿದೆ ಎಂದು ಮಾಜಿ ಶಾಸಕ ವೈ. ಸಂಪಂಗಿ ಟೀಕಿಸಿದರು.
ನಗರದ ಗನ್‌ಹೌಸ್ ಸಮೀಪದ ಶಂಕರಮಠದಲ್ಲಿ ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಎಸ್‌ಸಿ, ಎಸ್‌ಟಿ ಮೋರ್ಚಾ ಹಾಗೂ ಸ್ಲಂ ಮೋರ್ಚಾವು  ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ  ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರನ್ನು ಮರೆತಿದ್ದಾರೆ.
ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರ ಪರಿಣಾಮ ಈ ವರ್ಗದ ಫಲಾನುಭವಿಗಳಿಗೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಯೋಜನೆ ಸರಿಯಾಗಿ ಜಾರಿಗೊಳಿಸಲು ಆಗುತ್ತಿಲ್ಲ. ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಆಂತರಿಕ ಭಿನ್ನಾಭಿಪ್ರಾಯದ ನಡುವೆಯೂ ಫಲಾನುಭವಿಗಳಿಗೆ ಯೋಜನೆ ತಲುಪಿಸುವಲ್ಲಿ ಯಶಸ್ವಿಯಾಗದೆ ಎಂದರು.
ರಾಜ್ಯ ಸರ್ಕಾರದ ಆಡಳಿತ ಯಂತ್ರ ಕೆಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜು. 22ಕ್ಕೆ ಕೈಗೊಂಡಿರುವ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಕ್ತಿ ಪ್ರದರ್ಶಿಸಬೇಕು. ಅಲ್ಲದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಿಜೆಪಿ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ನಗರಾಧ್ಯಕ್ಷ ಇ. ಮಾರುತಿರಾವ್ ಪವಾರ್ ಮಾತನಾಡಿ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವ ಕುರಿತು ವಿವಿಧ ಮೋರ್ಚಾಗಳ ಮುಖಂಡರು ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ರಾಜ್ಯ ಕಾರ್ಯದರ್ಶಿ ಸಿದ್ದರಾಜು, ಸ್ಲಂ ಮೋರ್ಚಾ ರಾಜ್ಯಾಧ್ಯಕ್ಷ ಎಲ್. ನಾಗೇಂದ್ರ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಯಶಸ್ವಿನಿ ಸೋಮಶೇಖರ್, ಸೋಮಸುಂದರ್, ಮುಖಂಡರಾದ ಸತೀಶ್, ಮೈ.ಕಾ. ಪ್ರೇಮ್‌ಕುಮಾರ್, ಜೋಗಿ ಮಂಜು, ರಾಜೂಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.