ಎತ್ತಿನಗಾಡಿ ಮಾಲೀಕರ ಪ್ರತಿಭಟನೆ ಮುಂದುವರಿಕೆ
ಟಿ. ನರಸೀಪುರ: ಪಟ್ಟಣದ ಲೋಕೋಪಯೋಗಿ ಕಚೇರಿ ಆವರಣದಲ್ಲಿ ಮರಳು ಸಾಗಾಣಿಕೆಗೆ ಪರ್ಮಿಟ್ ನೀಡಬೇಕು. ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡಿರುವ ಎತ್ತಿನ ಗಾಡಿಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಳೆದ ಗುರುವಾರದಿಂದ ಮಾಲೀಕರು ಮತ್ತು ಕೂಲಿ ಕಾರ್ಮಿಕರು ಆರಂಭಿಸಿರುವ ಪ್ರತಿಭಟನಾ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಜೀವನ ನಿರ್ವಹಣೆಗೆ ಮರಳು ಕೂಲಿಯನ್ನು ಅವಲಂಬಿಸಿರುವ ದುಡಿಯುವ ವರ್ಗದ ಜನರು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಸೌಜನ್ಯಕ್ಕಾಗದರೂ ಸ್ಪಂದಿಸಿಲ್ಲ. ಲೋಕೋಪಯೋಗಿ ಇಲಾಖೆಯ ಎಇಇ ವಿನಯ್‌ಕುಮಾರ್ ಮನವಿ ಸ್ವೀಕರಿಸಿದರಾದರೂ ಯಾವುದೇ ಭರವಸೆ ನೀಡಲು ನಿರಾಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಹೋರಾಟವನ್ನು ಜಿಲ್ಲಾಡಳಿತ ನಿರ್ಲಕ್ಷಿಸುತ್ತಿರುವ ಹಿನ್ನೆಲೆಯಲ್ಲಿ ಜು.19ರ ಶನಿವಾರ ಎತ್ತಿನ ಗಾಡಿಗಳ ಮೆರವಣಿಗೆ ಮೂಲಕ ಪ್ರತಿಭಟಿಸಲಾಗುವುದು ಎಂದು ಸಂಘದ ಅಧ್ಯಕ್ಷ ತಿರುಮಕೂಡಲು ಪುಟ್ಟು ಹೇಳಿದರು. ಪ್ರತಿಭಟನೆಯಲ್ಲಿ ಕಾರ್ಯದರ್ಶಿ ದೀಪು, ಉಪಾಧ್ಯಕ್ಷ ಮಹೇಶ್, ಮುಖಂಡರಾದ ಗರ್ಗೇಶ್ವರಿ ರೇವಣ್ಣ, ಹಾಲೇಗೌಡ, ದೇವರಾಜು, ತಲಕಾಡು ಚಿಕ್ಕಣ್ಣ, ಶಂಕರ, ಮಹೇಶ್, ಪಾಪು, ಮಹದೇವಸ್ವಾಮಿ, ಸಿದ್ದರಾಜು, ದಿಲೀಪ್, ಅಭಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

